ನವದೆಹಲಿ: ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ಅವರನ್ನು ಬಿಸಿಸಿಐ ನೇಮಕ ಮಾಡಿದೆ.
ಮಾ.4ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸುವ ಸಲುವಾಗಿ ರೋಹಿತ್ ಶರ್ಮಾ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಇದನ್ನೂ ಓದಿ: ವಿರಾಟ್ ಅಭಿಮಾನಿಗಳಿಗಿಲ್ಲ ಗಡಿರೇಖೆ – ಪಾಕ್ ಕ್ರಿಕೆಟ್ ಲೀಗ್‍ನಲ್ಲಿ ರಾರಾಜಿಸಿದ ಕೊಹ್ಲಿ ಪೋಸ್ಟರ್
ನಾಯಕ ಸ್ಥಾನದಿಂದ ವಿರಾಟ್ ಕೊಹ್ಲಿ ಕೆಳಗಿಳಿದ ಬಳಿಕ ಏಕದಿನ, ಟಿ20 ತಂಡದ ನಾಯಕತ್ವ ವಹಿಸಿದ್ದ ರೋಹಿತ್ ಶರ್ಮಾಗೆ ಇದೀಗ ಟೆಸ್ಟ್ ನಾಯಕನ ಹೊಣೆ ಹೊರಿಸಲಾಗಿದೆ.
ರೋಹಿತ್ ಶರ್ಮಾ ಟೆಸ್ಟ್ ನಾಯಕತ್ವವನ್ನು ಆರಂಭಿಸಲಿದ್ದಾರೆ. ಆ ಮೂಲಕ ನಮ್ಮ ದೇಶದ ನಂಬರ್ ಒನ್ ಕ್ರಿಕೆಟ್ ಆಟಗಾರರೆನಿಸಿದ್ದಾರೆ ಎಂದು ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಆರ್ಸಿಬಿಯಲ್ಲಿ K.G.F ಸ್ಟಾರ್ಸ್
ಕಳೆದ ವರ್ಷ ವಿರಾಟ್ ಕೊಹ್ಲಿ ಟಿ20 ನಾಯಕತ್ವಕ್ಕೆ ವಿದಾಯ ಹೇಳಿದ್ದರು. ನಂತರ ಅವರನ್ನು ಏಕದಿನ ತಂಡದ ನಾಯಕತ್ವ ಸ್ಥಾನದಿಂದ ಕೆಳಗಿಳಿಸಲಾಯಿತು. ಅದಾದ ಬಳಿಕ ಜನವರಿಯಲ್ಲಿ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವ ತೊರೆದಿದ್ದರು. ಇದನ್ನೂ ಓದಿ: Ranji Trophy: ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ ಯಶ್ ಧುಲ್