ಢಾಕಾ: ಭಾರತ (India) ಹಾಗೂ ಬಾಂಗ್ಲಾದೇಶ (Bangladesh) ನಡುವಿನ ಮೊದಲ ಟೆಸ್ಟ್ (Test) ಪಂದ್ಯದಿಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹೊರಗುಳಿಯಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಕನ್ನಡಿಗ ಕೆ.ಎಲ್ ರಾಹುಲ್ (KL Rahul) ಮುನ್ನಡೆಸಲಿದ್ದಾರೆ.
Advertisement
ರೋಹಿತ್ ಶರ್ಮಾ ಎರಡನೇ ಏಕದಿನ ಪಂದ್ಯದ ವೇಳೆ ಎಡಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಆ ಬಳಿಕ ಮೂರನೇ ಏಕದಿನ ಪಂದ್ಯ ಆಡಿರಲಿಲ್ಲ. ಇದೀಗ ಗಾಯದಿಂದ ಚೇತರಿಕೆ ಕಾಣದ ಹಿನ್ನೆಲೆ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ. ಇದನ್ನೂ ಓದಿ: ಇಶಾನ್ ಕಿಶನ್ ಒಂದೇ ದ್ವಿಶತಕಕ್ಕೆ ಹಲವು ದಾಖಲೆಗಳು ಉಡೀಸ್ – ಕೊಹ್ಲಿಗೆ ಥ್ಯಾಂಕ್ಸ್
Advertisement
Advertisement
ಟೆಸ್ಟ್ ಸರಣಿ ಡಿ.14 ರಿಂದ ಆರಂಭವಾಗಲಿದೆ. ರೋಹಿತ್ ಬದಲಿಗೆ ಅಭಿಮನ್ಯು ಈಶ್ವರನ್ ತಂಡ ಸೇರಿಕೊಂಡಿದ್ದಾರೆ. ಈ ನಡುವೆ ಗಾಯದಿಂದ ಚೇತರಿಕೆ ಕಾಣದಿದ್ದಲ್ಲಿ 2ನೇ ಟೆಸ್ಟ್ ಪಂದ್ಯದಿಂದಲೂ ರೋಹಿತ್ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ.
Advertisement
ಏಕದಿನ ಸರಣಿಯಲ್ಲಿ 2-1 ಅಂತರದಲ್ಲಿ ಭಾರತ ಸರಣಿ ಸೋಲು ಕಂಡಿತ್ತು. ಇದೀಗ ಟೆಸ್ಟ್ ಸರಣಿಗೆ ಸಿದ್ಧವಾಗುತ್ತಿದ್ದು, ಈಗಾಗಲೇ ಗಾಯದಿಂದಾಗಿ ತಂಡದಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ಬದಲು ನವದೀಪ್ ಸೈನಿ, ಸೌರಭ್ ಕುಮಾರ್ ಮತ್ತು ಜೈದೇವ್ ಉನದ್ಕತ್ ಅವರನ್ನು ಹೆಚ್ಚುವರಿಯಾಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಸೂಪರ್ ಓವರ್‌ನಲ್ಲಿ ಸಿಕ್ಸರ್, ಬೌಂಡರಿ – ಆಸೀಸ್ ವಿರುದ್ಧ ಭಾರತಕ್ಕೆ 4 ರನ್ ರೋಚಕ ಜಯ
ಟೀಂ ಇಂಡಿಯಾ:
ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ನವದೀಪ್ ಸೈನಿ, ಸೌರಭ್ ಕುಮಾರ್, ಜಯದೇವ್ ಉನದ್ಕತ್.