ಬೆಂಗಳೂರು: ಗಾಯಳುವಾಗಿ ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದಿರುವ ಟೀಂ ಇಂಡಿಯಾದ ಸೀಮಿತ ಓವರ್‌ಗಳ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಆಲ್‍ರೌಂಡರ್ ರವೀಂದ್ರ ಜಡೇಜಾ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(NCA) ಮುಖ್ಯಸ್ಥರಾದ ಲಕ್ಷ್ಮಣ್ ಗರಡಿಯಲ್ಲಿ ಅಭ್ಯಾಸ ಆರಂಭಿಸಿದ್ದಾರೆ.
Advertisement
ಶರ್ಮಾ ಮತ್ತು ಜಡೇಜಾ ಬೆಂಗಳೂರಿನಲ್ಲಿರುವ NCA ಅಕಾಡೆಮಿಯಲ್ಲಿ ಗಾಯದಿಂದ ಚೇತರಿಸಿಕೊಳ್ಳಲು ಆಗಮಿಸಿದ್ದು, ಈಗಾಗಲೇ ಅಭ್ಯಾಸ ಆರಂಭಿಸಿ ಮತ್ತೆ ಫಿಟ್ ಆಗಿ ತಂಡಕ್ಕೆ ಕಮ್‍ಬ್ಯಾಕ್ ಆಗಲು ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ವಿ.ವಿ.ಎಸ್ ಲಕ್ಷ್ಮಣ್ ಎನ್‍ಸಿಎ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿಕೊಂಡಿದ್ದರು. ಅವರು ಇದೀಗ ರೋಹಿತ್ ಮತ್ತು ಜಡೇಜಾಗೆ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದಾರೆ. ಇದನ್ನೂ ಓದಿ: ಎನ್‌ಸಿಎಯಲ್ಲಿ ಪಾಠ ಆರಂಭಿಸಿದ ಲಕ್ಷ್ಮಣ್
Advertisement
Advertisement
ರವೀಂದ್ರ ಜಡೇಜಾ ಮೊಣಕಾಲು ಗಾಯದಿಂದ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದು, ರೋಹಿತ್ ಮುಂಬೈನಲ್ಲಿ ಅಭ್ಯಾಸದ ವೇಳೆ ಗಾಯಗೊಂಡು ಮೂರು ಅಥವಾ ನಾಲ್ಕು ವಾರಗಳ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ತಿಳಿಸಿದ್ದರು. ಇದೀಗ ಇವರಿಬ್ಬರೂ ಕೂಡ ಬೆಂಗಳೂರಿನಲ್ಲಿ ಗಾಯದಿಂದ ಚೇತರಿಕೆ ಕಾಣುತ್ತಿದ್ದಾರೆ. ಇದನ್ನೂ ಓದಿ: ಹೇಳದೇ ಕೇಳದೇ ನಾಯಕ ಪಟ್ಟದಿಂದ ತೆಗೆದ್ರು – ಮೌನ ಮುರಿದ ಕೊಹ್ಲಿ
Advertisement