ಕೋಲ್ಕತಾ: ಕೀವಿಸ್ ವಿರುದ್ಧ ನಡೆದ ಮೂರನೇ ಟಿ-20 ಪಂದ್ಯದಲ್ಲಿ ಭಾರತದ ವೇಗಿ ದೀಪಕ್ ಚಹರ್ ಸಿಡಿಸಿದ ಸಿಕ್ಸ್‌ಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸೆಲ್ಯೂಟ್ ಹೊಡೆದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.
20ನೇ ಓವರ್ ಎಸೆದ ಆಡಮ್ ಮಿಲ್ನೆ ಅವರ 4ನೇ ಎಸೆತವನ್ನು ಡೀಪ್ ಮಿಡ್ ವಿಕೆಟ್‍ನಲ್ಲಿ ಸಿಕ್ಸ್ ಸಿಡಿಸಿದರು. ಇದರಿಂದ ಪ್ರಭಾವಿತನಾದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಡ್ರೆಸ್ಸಿಂಗ್ ರೂಮಿನಲ್ಲಿ ಸೆಲ್ಯೂಟ್ ಹೊಡೆದಿದ್ದಾರೆ. ಈ ವಿಡಿಯೋಕ್ಕೆ ಈಗ ನೆಟ್ಟಿಗರಿಂದ ಪ್ರಶಂಸೆಯ ಸುರಿಮಳೆ ಹರಿದು ಬರುತ್ತಿದೆ. ಇದನ್ನೂ ಓದಿ: ಲಿಂಗ ತಾರತಮ್ಯವಿಲ್ಲದೇ ಒಂದೇ ರೀತಿ ಸಮವಸ್ತ್ರ ನೀಡಿದ ಕೇರಳ ಶಾಲೆ
ಕೇವಲ 8 ಎಸೆತಗಳಲ್ಲಿ 21 ರನ್ ದಾಖಲಿಸುವ ಮೂಲಕ ಭಾರತದ ವೇಗಿ ದೀಪಕ್ ಚಹರ್ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಿದರು. 9ನೇ ಕ್ರಮಾಂಕದ ಬ್ಯಾಟ್ಸ್‌ಮನ್ ಚಹರ್ ಎರಡು ಬೌಂಡರಿ ಮತ್ತು 1 ಸಿಕ್ಸ್ ಹೊಡೆಯುವ ಮೂಲಕ ಎಲ್ಲರ ಗಮನ ಸೆಳೆದರು. ಇದನ್ನೂ ಓದಿ: ಸಂಪೂರ್ಣ ಮನೆ ಹಾನಿಯಾಗಿದ್ದರೆ 1 ಲಕ್ಷ ರೂ. ಪರಿಹಾರ: ಸಿಎಂ
ಭಾರತ ನಿಗದಿತ 20 ಓವರ್‍ನಲ್ಲಿ 7 ವಿಕೆಟ್ ನಷ್ಟಕ್ಕೆ 187 ಬೃಹತ್ ಮೊತ್ತವನ್ನು ಪೇರಿಸಿತ್ತು. ಕೋಲ್ಕತಾದ ಈಡನ್ ಗಾರ್ಡ್‍ನ್‍ಲ್ಲಿ ನಡೆದ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ತಂಡ 72 ರನ್‍ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ 3-0 ಅಂತರದಲ್ಲಿ ರೋಹಿತ್ ಪಡೆ ಸರಣಿಯನ್ನು ತನ್ನದಾಗಿಸಿಕೊಂಡಿದೆ.