ಲಂಡನ್: ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯಕ್ಕಾಗಿ ಪ್ರವಾಸದಲ್ಲಿರುವ ಟೀಂ ಇಂಡಿಯಾಗೆ ಶಾಕ್ ಎದುರಾಗಿದೆ. ತಂಡದ ನಾಯಕ ರೋಹಿತ್ ಶರ್ಮಾಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ.
Advertisement
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಬಿಸಿಸಿಐ, ನಿನ್ನೆ ಕೊರೊನಾ ಟೆಸ್ಟ್ ಮಾಡುವ ವೇಳೆ ರೋಹಿತ್ ಶರ್ಮಾಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ರೋಹಿತ್ ತಂಡದ ಹೋಟೆಲ್‍ನಲ್ಲಿ ಐಸೋಲೇಷನ್‍ನಲ್ಲಿದ್ದು, ಬಿಸಿಸಿಐ ವೈದ್ಯಕೀಯ ತಂಡ ಅವರ ಅರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಬೀದಿ ಬೀದಿ ಸುತ್ತಾಡಬೇಡಿ ಕೊಹ್ಲಿ, ರೋಹಿತ್ ವಿರುದ್ಧ ಬಿಸಿಸಿಐ ಗರಂ
Advertisement
Advertisement
ಇಂಗ್ಲೆಂಡ್‍ನಲ್ಲಿ ಬೀಡುಬಿಟ್ಟಿರುವ ಟೀಂ ಇಂಡಿಯಾ ಆಟಗಾರರು ಈಗಾಗಲೇ ಅಭ್ಯಾಸ ಪಂದ್ಯವನ್ನು ಆಡುತ್ತಿದ್ದಾರೆ. ಅಭ್ಯಾಸ ಪಂದ್ಯದಲ್ಲಿ ರೋಹಿತ್ ಶರ್ಮಾ ತಂಡದ ನಾಯಕನಾಗಿ ತಂಡದೊಂದಿಗಿದ್ದರು. ಹಾಗಾಗಿ ಇನ್ನಷ್ಟು ಆತಂಕ ಎದುರಾಗಿದ್ದು, ಟೆಸ್ಟ್ ಪಂದ್ಯ ಕ್ಯಾನ್ಸಲ್ ಆಗುವ ಭೀತಿ ಎದುರಾಗಿದೆ. ಟೀಂ ಇಂಡಿಯಾ ಇಂಗ್ಲೆಂಡ್‍ಗೆ ತೆರಳಿದ ಬಳಿಕ ಆರ್.ಅಶ್ವಿನ್‍ಗೆ ಕೊರೊನಾ ಕಾಣಿಸಿಕೊಂಡಿತ್ತು. ಬಳಿಕ ಇದೀಗ ಅಶ್ವಿನ್ ಚೇತರಿಸಿಕೊಂಡಿದ್ದಾರೆ. ಇದನ್ನೂ ಓದಿ: ಜಾನಿ ಬೈರ್‌ಸ್ಟೋವ್ ಶತಕ ಸಿಡಿಸುತ್ತಿದ್ದಂತೆ ಚಪ್ಪಲಿ ತೆಗೆದು ಕೈಯಲ್ಲಿ ಹಿಡಿದ ಅಭಿಮಾನಿಗಳು!
Advertisement
UPDATE – #TeamIndia Captain Mr Rohit Sharma has tested positive for COVID-19 following a Rapid Antigen Test (RAT) conducted on Saturday. He is currently in isolation at the team hotel and is under the care of the BCCI Medical Team.
— BCCI (@BCCI) June 25, 2022
ಕಳೆದ ವರ್ಷ 5 ಪಂದ್ಯಗಳ ಟೆಸ್ಟ್ ಸರಣಿಯ ವೇಳೆ ತಂಡದಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಿತ್ತು. ಕೋವಿಡ್ ಹೆಚ್ಚಾದ ಬಳಿಕ 5ನೇ ಪಂದ್ಯ ನಡೆಸದೆ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇದೀಗ ಈ ಪಂದ್ಯವನ್ನು ಮುಂದುವರಿಸುತ್ತಿದ್ದು, ಏಕೈಕ ಟೆಸ್ಟ್ ಪಂದ್ಯ ಜುಲೈ 1 ರಿಂದ ಆರಂಭವಾಗುತ್ತಿದೆ. ಈಗಾಗಲೇ ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು 2-1 ಅಂತರದ ಮುನ್ನಡೆ ಪಡೆದುಕೊಂಡಿದೆ.