ಮುಂಬೈ: ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಐತಿಹಾಸಿಕ ಗೆಲವು ಪಡೆದ ಸಂಭ್ರಮದಲ್ಲಿದ್ದ ರೋಹಿತ್ ಶರ್ಮಾಗೆ ಕೆಲವೇ ಗಂಟೆಗಳ ಅಂತರದಲ್ಲಿ ಮತ್ತೊಂದು ಸಿಹಿ ಸುದ್ದಿ ಲಭಿಸಿದ್ದು, ರೋಹಿತ್ ಹೆಣ್ಣು ಮಗುವಿನ ತಂದೆಯಾಗಿದ್ದಾರೆ.
ರೋಹಿತ್ ಪತ್ನಿ ರಿತಿಕಾ ಮುಂಬೈನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸುದ್ದಿ ತಿಳಿಯುತ್ತಿದಂತೆ ಕುಟುಂಬದೊಂದಿಗೆ ಕಾಲ ಕಳೆಯಲು ಇಚ್ಛಿಸಿರುವ ರೋಹಿತ್ ಆಸ್ಟ್ರೇಲಿಯಾದಿಂದ ತವರಿಗೆ ವಾಪಸ್ ಆಗಿದ್ದಾರೆ. ಅಂದಹಾಗೇ 2017 ಡಿ. 13 ರಂದು ರೋಹಿತ್ ಶರ್ಮಾ ಮತ್ತು ರಿತಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
Advertisement
Advertisement
ಮೆಲ್ಬರ್ನ್ ಟೆಸ್ಟ್ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿದ್ದ ರೋಹಿತ್ ಜನವರಿ 3ರಿಂದ ಆರಂಭವಾಗಲಿರುವ ಅಂತಿಮ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸುವುದು ಅನುಮಾನವಾಗಿದೆ. ಈ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ ಸ್ಥಾನ ಪಡೆಯುವ ಸಾಧ್ಯತೆ ಇದೆ.
Advertisement
ರೋಹಿತ್ ಶರ್ಮಾ ಆಸೀಸ್ ಸರಣಿಯ ಟೆಸ್ಟ್ ಟೂರ್ನಿಗೆ ಆಯ್ಕೆ ಆಗುವ ಮೂಲಕ ಟೆಸ್ಟ್ ಕ್ರಿಕೆಟ್ ಮಾದರಿಗೆ ಕಮ್ ಬ್ಯಾಕ್ ಮಾಡಿದ್ದರು. ಮೊದಲ ಟೆಸ್ಟ್ ಪಂದ್ಯದಲ್ಲಿ ಕ್ರಮವಾಗಿ 37, 1 ರನ್ ಗಳಿಸಿದ್ದ ರೋಹಿತ್ ಗಾಯದ ಸಮಸ್ಯೆಯಿಂದ 2ನೇ ಟೆಸ್ಟ್ ನಿಂದ ಹೊರಗೆ ಉಳಿದಿದ್ದರು. 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಅಜೇಯ 63 ರನ್ ಗಳಿಸಿ ತಂಡದ ಸವಾಲಿನ ಮೊತ್ತ ಗಳಿಸಲು ಕಾಣಿಕೆ ನೀಡಿದ್ದರು.
Advertisement
ಸದ್ಯ ಆಸೀಸ್ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ಅಂತರದಲ್ಲಿ ಭಾರತ ಮುನ್ನಡೆ ಸಾಧಿಸಿದೆ. ಜನವರಿ 3ರಿಂದ ಸಿಡ್ನಿ ಅಂಗಳದಲ್ಲಿ ಕೊನೆಯ ಟೆಸ್ಟ್ ಆರಂಭವಾಗಲಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv