– ನವಜೋತ್ ಸಿಂಗ್ ಸಿಧು ಸಿಕ್ಸರ್ ದಾಖಲೆ ಉಡೀಸ್
– 41 ವರ್ಷದ ನಂತರ ದಾಖಲಾಯ್ತು ಶತಕ
ವಿಶಾಖಪಟ್ಟಣಂ: ಟೆಸ್ಟ್ ಕ್ರಿಕೆಟ್‍ನಲ್ಲಿ ಮೊದಲ ಬಾರಿಗೆ ತಂಡದ ಆರಂಭಿಕಾಗಿ ಕಣಕ್ಕೆ ಇಳಿದಿದ್ದ ರೋಹಿತ್ ಶರ್ಮಾ ಮೊದಲ ಇನ್ನಿಂಗ್ಸ್‍ನ ಶತಕ ಸಿಡಿಸುವ ಮೂಲಕ ತಂಡಕ್ಕೆ ಉತ್ತಮ ಆರಂಭ ನೀಡಿದ್ದರು. ಸದ್ಯ 2ನೇ ಇನ್ನಿಂಗ್ಸ್‍ನಲ್ಲೂ ಅಮೋಘ ಬ್ಯಾಟಿಂಗ್ ಮುಂದುವರಿಸಿರುವ ರೋಹಿತ್ ಮತ್ತೊಂದು ಶತಕ ಸಿಡಿಸಿದ್ದಾರೆ. ಅಲ್ಲದೇ ಟೀಂ ಇಂಡಿಯಾ ಪರ ಎಲ್ಲಾ ಮಾದರಿಯ ಕ್ರಿಕೆಟ್ ಪಂದ್ಯದಲ್ಲಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ದಾಖಲೆಯನ್ನು ಬರೆದಿದ್ದಾರೆ.
Advertisement
ಟೀಂ ಇಂಡಿಯಾ ಪರ 41 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್ ನಲ್ಲಿ ಆರಂಭಿಕ ಆಟಗಾರ ಪಂದ್ಯವೊಂದರ 2 ಇನ್ನಿಂಗ್ಸ್ ಗಳಲ್ಲಿ ಶತಕ ಸಿಡಿಸಿದ್ದಾರೆ. 1978-79 ರಲ್ಲಿ ಟೀಂ ಇಂಡಿಯಾ ಪರ ಸುನೀಲ್ ಗವಾಸ್ಕರ್ ಈ ಸಾಧನೆಯನ್ನು ಮಾಡಿದ್ದರು. ಅಲ್ಲದೇ ರೋಹಿತ್ ಆರಂಭಿಕರಾಗಿ ಕಣಕ್ಕೆ ಇಳಿದ ಮೊದಲ ಪಂದ್ಯದ 2 ಇನ್ನಿಂಗ್ಸ್ ಗಳಲ್ಲಿ ಶತಕ ಸಿಡಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
Advertisement
ಪಂದ್ಯದ ಮೊದಲ ಇನ್ನಿಂಗ್ಸ್‍ನಲ್ಲಿ 32 ವರ್ಷದ ರೋಹಿತ್ 224 ಎಸೆತಗಳಲ್ಲಿ 176 ರನ್ ಗಳಿಸಿ ಔಟಾಗಿದ್ದರು. ಸದ್ಯ 2ನೇ ಇನ್ನಿಂಗ್ಸ್ ನಲ್ಲಿ 133 ಎಸೆತಗಳಲ್ಲಿ ಶತಕ ಸಿಡಿಸಿದರು. ಈ ಮೂಲಕ ಟೆಸ್ಟ್ ಪಂದ್ಯವೊಂದರ 2 ಇನ್ನಿಂಗ್ಸ್ ಗಳಲ್ಲಿ ಶತಕ ಸಿಡಿಸಿದ 6ನೇ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದರು.
Advertisement
Well played, @ImRo45 ????????@Paytm #INDvSA pic.twitter.com/NsSGb5n5Sa
— BCCI (@BCCI) October 5, 2019
Advertisement
ಸಿಕ್ಸರ್ ದಾಖಲೆ: ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 6 ಸಿಕ್ಸರ್ ಸಿಡಿಸಿದ್ದ ರೋಹಿತ್, 2ನೇ ಇನ್ನಿಂಗ್ಸ್ ನಲ್ಲಿ 7 ಸಿಕ್ಸರ್ ಸಿಡಿಸಿದರು. ಆ ಮೂಲಕ 149 ಎಸೆತಗಳಲ್ಲಿ 85.23 ಸರಾಸರಿಯಲ್ಲಿ 127 ರನ್ ಗಳಿಸಿ ಔಟಾದರು. ಟೀಂ ಇಂಡಿಯಾ ಪರ ಟೆಸ್ಟ್ ಪಂದ್ಯವೊಂದರಲ್ಲಿ ಹೆಚ್ಚು ಸಿಕ್ಸರ್ ಸಿಡಿಸಿದ್ದ ನವಜೋತ್ ಸಿಂಗ್ ಸಿಧು ಅವರ ದಾಖಲೆಯನ್ನು ರೋಹಿತ್ ಮುರಿದರು. 1994ರಲ್ಲಿ ಶ್ರೀಲಂಕಾ ವಿರುದ್ಧ ನಡೆದಿದ್ದ ಲಕ್ನೋ ಟೆಸ್ಟ್ ಪಂದ್ಯದಲ್ಲಿ ಸಿಧು 8 ಸಿಕ್ಸರ್ ಸಿಡಿಸಿದ್ದರು. ರೋಹಿತ್ ಈ ಪಂದ್ಯದಲ್ಲಿ 13 ಸಿಕ್ಸರ್ ಸಿಡಿಸಿದ್ದಾರೆ.
ಟೀಂ ಇಂಡಿಯಾ ಎಲ್ಲಾ ಮಾದರಿಗಳ ಕ್ರಿಕೆಟ್ ಪಂದ್ಯಗಳಲ್ಲಿ ರೋಹಿತ್ ಹೆಚ್ಚು ಸಿಕ್ಸರ್ ಸಿಡಿಸಿದ ಸಾಧನೆ ಮಾಡಿದ್ದು, 2013ರಲ್ಲಿ ಆಸೀಸ್ ವಿರುದ್ಧ ಬೆಂಗಳೂರಿನಲ್ಲಿ ನಡೆದಿದ್ದ ಏಕದಿನ ಪಂದ್ಯದಲ್ಲಿ 16 ಸಿಕ್ಸರ್ ಸಿಡಿಸಿದ್ದರು. ಅಲ್ಲದೇ 2017 ರಲ್ಲಿ ಶ್ರೀಲಂಕಾ ವಿರುದ್ಧ ಇಂದೋರ್‍ನಲ್ಲಿ ನಡೆದಿದ್ದ ಟಿ20 ಪಂದ್ಯದಲ್ಲಿ 10 ಸಿಕ್ಸರ್ ಸಿಡಿಸಿದ್ದರು.
???? Rohit Sharma's Test average in India has now crossed 1️⃣0️⃣0️⃣
Follow #INDvSA LIVE ????https://t.co/dCGJ4Pcug5 pic.twitter.com/qlhWWm4qcE
— ICC (@ICC) October 5, 2019