ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಬುಧವಾರ ನಡೆದ ಅಫ್ಘಾನಿಸ್ತಾನ (Afghanistan) ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) 121 ರನ್ ಗಳಿಸುವ ಮೂಲಕ 5 ಅಂತಾರಾಷ್ಟ್ರೀಯ ಟಿ20 (T20) ಶತಕ ಸಿಡಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.
ಟಾಪ್ 5 T20 ಶತಕ ಬಾರಿಸಿದವರು:
1) ರೋಹಿತ್ ಶರ್ಮಾ (ಭಾರತ) – 5
2) ಸೂರ್ಯಕುಮಾರ್ ಯಾದವ್ (ಭಾರತ) – 4
3) ಗ್ಲೆನ್ ಮ್ಯಾಕ್ಸ್‌ವೆಲ್ (ಆಸ್ಟ್ರೇಲಿಯಾ) – 4
4) ಸಬಾವೂನ್ ಡೇವಿಜಿ (ಜೆಕ್ ರಿಪಬ್ಲಿಕ್)- 3
5) ಕಾಲಿನ್ ಮುನ್ರೊ (ನ್ಯೂಜಿಲೆಂಡ್) – 3
Advertisement
Advertisement
ಆಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಮೊದಲಿಗೆ ಭಾರತ ಕೇವಲ 4.3 ಓವರ್‌ಗಳಲ್ಲಿ 22 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿತ್ತು. ಬಳಿಕ ರೋಹಿತ್ ಶರ್ಮಾ ಹಾಗೂ ರಿಂಕು ಉತ್ತಮ ಪ್ರದರ್ಶನ ನೀಡಿ 212 ರನ್ ಗಳಿಸಿ ಅಫ್ಘಾನಿಸ್ತಾನಕ್ಕೆ 213 ರನ್‌ಗಳ ಟಾರ್ಗೆಟ್ ನೀಡಿದರು. ಇದನ್ನೂ ಓದಿ: ರೋಹಿತ್ ಶತಕ, ರಿಂಕು ಹಾಫ್ ಸೆಂಚುರಿ, ವಿರಾಟ್ ಕೊಹ್ಲಿ 0- ಆಫ್ಘನ್‍ಗೆ 213 ರನ್ ಟಾರ್ಗೆಟ್
Advertisement
Advertisement
64 ಎಸೆತಗಳಲ್ಲಿ ಸೆಂಚುರಿ ಬಾರಿಸಿದ ರೋಹಿತ್ ಶರ್ಮಾ ನಾಲ್ಕು ಅಂತರಾಷ್ಟ್ರೀಯ ಶತಕಗಳನ್ನು ಹೊಂದಿರುವ ಸೂರ್ಯಕುಮಾರ್ ಯಾದವ್ ಮತ್ತು ಗ್ಲೆನ್ ಮ್ಯಾಕ್ಸ್ ವೆಲ್ ಅವರನ್ನು ಹಿಂದಿಕ್ಕಿ ಹೊಸ ಮೈಲಿಗಲ್ಲನ್ನು ಸಾಧಿಸಿದ್ದಾರೆ. ನಿಗದಿತ 20 ಓವರ್ ಮುಗಿದಾಗ 69 ಎಸೆತಗಳಲ್ಲಿ 11 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ 121 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು. ಇದನ್ನೂ ಓದಿ: IND Vs AFG: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ರೋಹಿತ್
ರೋಹಿತ್ ಶರ್ಮಾ ನಾಯಕತ್ವ ವಹಿಸಿದ 54 ಪಂದ್ಯಗಳಲ್ಲಿ 1,648 ರನ್ ಗಳಿಸಿದ್ದರೆ, ಕೊಹ್ಲಿ ನಾಯಕನಾಗಿ 50 ಪಂದ್ಯಗಳಿಂದ 1,570 ರನ್ ಗಳಿಸಿದ್ದಾರೆ. ಇದನ್ನೂ ಓದಿ: ಜ.18ರಂದು ಚಿಕ್ಕಬಳ್ಳಾಪುರದಲ್ಲಿ T20I ಲೀಗ್ – ಕಣದಲ್ಲಿ ಅಬ್ಬರಿಸಲಿದ್ದಾರೆ ಸಚಿನ್, ಯುವಿ, ಜಯಸೂರ್ಯ
2019ರಿಂದ ಭಾರತದಲ್ಲಿ ಆಡಿದ ಟಿ20 ಸರಣಿಯಲ್ಲಿ ಒಂದರಲ್ಲೂ ಭಾರತ ಸರಣಿಯನ್ನು ಸೋತಿಲ್ಲ. ಆಡಿದ 15 ಸರಣಿಗಳಲ್ಲಿ 13 ಸರಣಿಯನ್ನು ಗೆದ್ದಿದ್ದರೆ, ಉಳಿದ ಎರಡು ಸರಣಿ ಡ್ರಾದಲ್ಲಿ ಅಂತ್ಯಗೊಂಡಿದೆ. ಇದನ್ನೂ ಓದಿ: ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕ್ರಿಕೆಟಿಗ ಕೆ.ಎಲ್.ರಾಹುಲ್