Sunday, 20th January 2019

ಲೈಂಗಿಕ ಕಿರುಕುಳ ನೀಡಿದ ಟ್ರಾಫಿಕ್ ಪೊಲೀಸ್ ಕೆನ್ನೆಗೆ ಭಾರಿಸಿದ ಯುವತಿ

ರೋಹ್ಟಕ್: ಟ್ರಾಫಿಕ್ ಪೊಲೀಸ್ ಒಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾರಣ ಆಕೆಯಿಂದ ಹೊಡೆತ ತಿಂದಿರುವ ಘಟನೆ ಹರಿಯಾಣದ ರೋಹ್ಟಕ್ ಪ್ರದೇಶದಲ್ಲಿ ನಡೆದಿದೆ.

ಕರಾಟೆ ತರಬೇತಿ ತರಗತಿಯಿಂದ ಆಟೋದಲ್ಲಿ ಮನೆಗೆ ಹಿಂದಿರುವ ವೇಳೆ ಘಟನೆ ನಡೆದಿದ್ದು, ಪೊಲೀಸ್ ಆಕೆಯ ಫೋನ್ ನಂಬರ್ ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಮಾಧ್ಯಮಮೊಂದು ವರದಿ ಮಾಡಿದೆ. ಅಂದಹಾಗೇ ಯುವತಿ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಆಗಿದ್ದು, ಹಲವು ಟೂರ್ನಿಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಘಟನೆ ಬಳಿಕ ಆರೋಪಿ ಅಧಿಕಾರಿಯ ವಿರುದ್ಧ ದೂರು ದಾಖಲಿಸಲಾಗಿದೆ. ಅಲ್ಲದೇ ಆತನನ್ನು ಸೇವೆಯಿಂದ ಅಮಾನತುಗೊಳಿಸಿ ಅದೇಶ ನೀಡಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2017 ರಲ್ಲಿ ದೆಹಲಿ ಹೈಕೋರ್ಟ್ ಶಾಲೆಗಳಲ್ಲಿ ಯುವತಿಯರಿಗೆ ಹಾಗೂ ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣಾ ಕಲೆ ತರಬೇತಿ ನೀಡುವ ಕುರಿತು ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ಕುರಿತು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೂ ನ್ಯಾಯಾಲಯ ಸೂಚಿಸಿತ್ತು.

Leave a Reply

Your email address will not be published. Required fields are marked *