ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ಮಾತನಾಡಬಾರದು, ಸಾಮಾಜಿಕ ಜಾಲತಾಣದಲ್ಲಿ (Social Media) ವೈಯಕ್ತಿಕ ಮಾನಹಾನಿ ಮಾಡಬಾರದು ಎಂದು ಕೋರ್ಟ್ ತಡೆಯಾಜ್ಞೆ ನೀಡಿದ್ದರೂ ಸಾಮಾಜಿಕ ಜಾಲತಾಣದಲ್ಲಿ ರೂಪಾ (IPS Roopa) ಮತ್ತೆ ಪೋಸ್ಟ್ ಹಾಕುವುದನ್ನು ಮುಂದುವರಿಸಿದ್ದಾರೆ.
ರೋಹಿಣಿ ಸಿಂಧೂರಿ ವಿರುದ್ದ ಸರ್ಕಾರದ ಕೆಲವು ಕ್ರಮಗಳ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು. ಈ ಮಾಧ್ಯಮ ವರದಿಯ ಕೆಲವು ಪೋಸ್ಟ್ಗಳನ್ನು ತಮ್ಮ ಫೇಸ್ ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ದಯವಿಟ್ಟು ನನ್ನನ್ನು ಜೈಲಿಂದ ಹೊರಗೆ ಕಳಿಸ್ಬೇಡಿ – ಎನ್ಕೌಂಟರ್ ಭೀತಿಗೆ ನ್ಯಾಯಾಲಯ ಮೊರೆ ಹೋದ UP ಗ್ಯಾಂಗ್ಸ್ಟರ್
Advertisement
Advertisement
ರೋಹಿಣಿ ಸಿಂಧೂರಿ ಅವರು ಡಿ. ರೂಪಾ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಮಂಗಳವಾರ ಪತಿ ಸುಧೀರ್ ರೆಡ್ಡಿ (Sudhir Reddy) ಜೊತೆ ಖುದ್ದು 24ನೇ ಎಸಿಎಂಎಂ ಕೋರ್ಟ್ಗೆ (ACMM Court) ಹಾಜರಾಗಿದ್ದ ರೋಹಿಣಿ ಸಿಂಧೂರಿ, ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರು.
Advertisement
ತಡೆಯಾಜ್ಞೆ ಇದ್ದರೂ, ರೂಪಾ ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್ ಹಾಕುತ್ತಲೇ ಇದ್ದಾರೆ. ಅವಹೇಳನ ಬರವಣಿಗೆ ಪೋಸ್ಟ್ ಮಾಡುತ್ತಿದ್ದಾರೆ. ಕೆಲವೊಮ್ಮೆ ಮಾತನಾಡಿದರೆ ಪರವಾಗಿಲ್ಲ, ಪದೇ ಪದೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದರು.
Advertisement
ರೋಹಿಣಿ ಹೇಳಿಕೆ ಆಧರಿಸಿ ಡಿ.ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ಕೋರ್ಟ್ ಮಾರ್ಚ್ 3ಕ್ಕೆ ವಿಚಾರಣೆ ಮುಂದೂಡಿದೆ.