ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ದೇವಿಗೆ ಚಿನ್ನದ ರಥ ಮಾಡಿಸುವುದು ಮತ್ತು ಬೆಟ್ಟಕ್ಕೆ ರೋಪ್ ವೇ ನಿರ್ಮಾಣದ ವಿಚಾರದಲ್ಲಿ ರಾಜ್ಯ ಸರ್ಕಾರ ಮಾತುಕತೆ ಆರಂಭಿಸಿದೆ.
ಸುಮಾರು 7 ಕೋಟಿ ವೆಚ್ಚದಲ್ಲಿ ಚಿನ್ನದ ರಥ ಮಾಡಿಸುವ ಪ್ರಸ್ತಾಪ ಸರ್ಕಾರದ ಮುಂದಿದೆ. ಈಗಾಗಲೇ ಈ ವಿಚಾರದಲ್ಲಿ ಅಧಿಕಾರಿಗಳ ಸಭೆಯೂ ನಡೆದಿದೆ. ಆದರೆ, ಈ ಪ್ರಸ್ತಾಪಕ್ಕೆ ಇನ್ನೂ ಸಿಎಂ ಒಪ್ಪಿಗೆ ಸಿಕ್ಕಿಲ್ಲ. ಮುಂದಿನ ಕ್ಯಾಬಿನೆಟ್ ಸಭೆ ವೇಳೆ ಈ ವಿಚಾರವನ್ನು ಸಿಎಂ ಮುಂದೆ ಪ್ರಸ್ತಾಪಿಸಿ ಈ ಬಗ್ಗೆ ಸ್ಪಷ್ಪ ನಿರ್ಧಾರ ತಿಳಿಸಲಾಗುವುದು ಎಂದು ಉಸ್ತುವಾರಿ ಸಚಿವ ವಿ. ಸೋಮಣ್ಣ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಿಳಿಸಿದರು.
Advertisement
Advertisement
ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಳವಡಿಸುವ ವಿಚಾರದಲ್ಲೂ ಚರ್ಚೆ ಸಾಗಿವೆ. ಈ ಬಗ್ಗೆಯೂ ಸಚಿವ ಸೋಮಣ್ಣ ಮಾಹಿತಿ ನೀಡಿ, ರೋಪ್ ವೇಯನ್ನು ಕೆಲವೆಡೆ ನೋಡಿದ್ದೇವೆ. ರೋಪ್ ವೇ ಮಾಡುವ ವಿಚಾರವಾಗಿ ಸಾಕಷ್ಟು ಚರ್ಚೆ ಆಗುತ್ತಿದೆ. ಅದರ ಸಾಧಕ ಬಾಧಕ ತಿಳಿಯಲು ಬಿಟ್ಟಿದ್ದೇವೆ. ಇದು ಅದು ಸರಿಯೇ? ಇಲ್ಲವೇ ಎಂಬುದು ಚರ್ಚೆಯಾಗಬೇಕು. ಅದಕ್ಕಾಗಿ ಚರ್ಚೆಯಾಗಲಿ ನಂತರ ಆ ಬಗ್ಗೆ ನೋಡೋಣ ಎಂದು ಹೇಳಿದರು.
Advertisement
ಕಾಮಗಾರಿ ವೀಕ್ಷಣೆ: ಚಾಮುಂಡಿಬೆಟ್ಟದ ನಂದಿ ಪ್ರತಿಮೆಗೆ ಸಾಗುವ ರಸ್ತೆ ಮಧ್ಯೆ ಉಂಟಾಗಿದ್ದ ರಸ್ತೆ ಕುಸಿತದ ದುರಸ್ಥಿ ಕಾಮಗಾರಿ ಪ್ರಗತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ವೀಕ್ಷಿಸಿದರು.ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ತ್ವರಿತವಾಗಿ ಕೆಲಸ ಮುಗಿಸಿ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸಚಿವರು ತಿಳಿಸಿದರು.
Advertisement
ಕಾಮಗಾರಿ 49 ಲಕ್ಷ ರೂಗಳ ಅಂದಾಜು ವೆಚ್ಚದಲ್ಲಿ ನಡೆಯುತ್ತಿದ್ದು, ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಲೋಕೋಪಯೋಗಿ ಕಾರ್ಯಪಾಲಕ ಇಂಜಿನಿಯರ್ ವಿನಯ್ ಕುಮಾರ್ ಮತ್ತಿತರರು ಇದ್ದರು.