ಶಿವಮೊಗ್ಗ: ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಕಿತ್ತಾಟದಿಂದ ಯುವಕನೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿರುವುದಾಗಿ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
Advertisement
ಇಂದು ಮೆಗ್ಗನ್ ಆಸ್ಪತ್ರೆಗೆ ಭೇಟಿ ನೀಡಿ ಐಸಿಯುನಲ್ಲಿರುವ ಪ್ರೇಮ್ ಸಿಂಗ್ ಅವರನ್ನು ವಿಚಾರಿಸಿ ನಂತರ ಘಟನೆ ಬಗ್ಗೆ ಮಾಹಿತಿ ಪಡೆದರು. ನಂತರ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲ್ಲೆಗೊಳಗಾದ ಪ್ರೇಮ್‍ಸಿಂಗ್, ಹಾಗೂ ಗುಂಡೇಟು ತಿಂದ ಮಹಮ್ಮದ್ ಜಭೀಯಿಂದ ಮಾಹಿತಿ ಪಡೆದಿದ್ದೇನೆ. ಪ್ರೇಮ್ ಸಿಂಗ್ ಅಣ್ಣ ಆತನ ಜೊತೆ ಇದ್ದು ನೋಡಿಕೊಳ್ಳುತ್ತಿದ್ದಾರೆ. ರಾಜಸ್ಥಾನದಲ್ಲಿರುವ ಅವರ ತಂದೆ, ತಾಯಿಗೆ ಮಾಹಿತಿ ನೀಡಲಾಗಿದೆ. ಅವರು ಶಿವಮೊಗ್ಗಕ್ಕೆ ಬರಲಿದ್ದಾರೆ. ಇಬ್ಬರ ಆರೋಗ್ಯವೂ ಸ್ಥಿರವಾಗಿದ್ದು, ಇಲ್ಲೇ ಚಿಕಿತ್ಸೆ ಮುಂದುವರೆಯಲಿದೆ. ಆರೋಪಿ ಮೊಹಮ್ಮದ್ ಜಭೀಯಿಂದಲೂ ಮಾಹಿತಿ ಪಡೆದಿದ್ದೇನೆ. ಎಎ ಸರ್ಕಲ್‍ನಲ್ಲಿ ಫ್ಲೆಕ್ಸ್ ತೆರವು ವೇಳೆ ನಡೆದ ಗಲಭೆಯಲ್ಲಿ ಜಭೀ ಪಾಲ್ಗೊಂಡಿದ್ದರು. ಇದೀಗ ಘಟನೆ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಉಳಿದವರವನ್ನು ಪತ್ತೆಹಚ್ಚಿ ಬಂಧಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಪೊಲೀಸರಿಗೂ ಚಾಕು ಇರಿಯಲು ಮುಂದಾದ ಕಿಡಿಗೇಡಿ
Advertisement
Advertisement
ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸೋಮವಾರ ಎರಡು ಕೋಮಿನ ನಡುವೆ ಜಟಾಪಟಿ ನಡೆದಿತ್ತು. ಒಂದು ಗುಂಪು ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಇಡಲು ಹೊರಟಿತ್ತು. ಈ ವೇಳೆ ಎರಡು ಕೋಮಿನ ನಡುವೆ ಜಟಾಪಟಿ ನಡೆದಿತ್ತು. ಈ ವೇಳೆ ಸಾವರ್ಕರ್ ಫೋಟೊವನ್ನು ಬೀಳಿಸುವುರ ಜೊತೆಗೆ ಅಲ್ಲೇ ಪಕ್ಕದಲ್ಲಿದ್ದ ರಾಷ್ಟ್ರಧ್ವಜವನ್ನು ನೆಲಕ್ಕೆ ಬೀಳಿಸುವುದರ ಮೂಲಕ ರಾಷ್ಟ್ರಧ್ವಜಕ್ಕೂ ಅವಮಾನ ಮಾಡಿದ್ದರು. ಇದನ್ನೂ ಓದಿ: ಧ್ವಜಾರೋಹಣವಾದ ಕೆಲವೇ ಗಂಟೆಗಳಲ್ಲಿ ಟಿಆರ್‌ಎಸ್ ಮುಖಂಡನ ಬರ್ಬರ ಹತ್ಯೆ
Advertisement
ಇದೇ ವಿಚಾರವಾಗಿ ಪ್ರೇಮ್ ಸಿಂಗ್ (26) ಚಾಕು ಇರಿದ ಘಟನೆ ಶಿವಮೊಗ್ಗದ ಗಾಂಧಿ ಬಜಾರಿನಲ್ಲಿ ನಡೆದಿದೆ. ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಮನೆ ಮುಂದೆ ನಿಂತಿದ್ದ ಪ್ರೇಮ್ ಸಿಂಗ್ ಮೇಲೆ ದಾಳಿ ನಡೆಸಿ ಚಾಕು ಇರಿದಿದ್ದರು. ಚಾಕು ಇರಿತಕ್ಕೊಳಗಾದ ಯುವಕ ಪ್ರೇಮ್ ಸಿಂಗ್‍ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.