ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರ ರೌಡಿ ನಲಪಾಡ್‍ಗೆ 8 ನೇ ಎಸಿಎಂಎಂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ.
ಪೊಲೀಸ್ ಕಸ್ಟಡಿಯಲ್ಲಿದ್ದ ನಲಪಾಡ್ ಮತ್ತು 7 ಮಂದಿ ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸರು ಮಧ್ಯಾಹ್ನ 4.10 ರ ವೇಳೆಗೆ ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿದರು. ಇದಾದ ಬಳಿಕ ಪೊಲೀಸರು ಕೋರ್ಟ್ ಗೆ ನಲಪಾಡ್ ಮತ್ತು ಆತನ ಗ್ಯಾಂಗ್ ಸದಸ್ಯರನ್ನು ಹಾಜರು ಪಡಿಸಿದ್ದರು. ಇದನ್ನೂ ಓದಿ: ಫರ್ಜಿ ಕೆಫೆಯಲ್ಲಿ ನಲಪಾಡ್ ಗುಂಡಾಗಿರಿ ಪ್ರಕರಣಕ್ಕೆ ಮೆಗಾ ಟ್ವಿಸ್ಟ್
Advertisement
ಜಡ್ಜ್ 14 ದಿನಗಳ ಕಾಲ ಅಂದರೆ ಮಾರ್ಚ್ 7ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ಪೊಲೀಸರು ನಲಪಾಡ್ ನನ್ನು ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು. ಇದನ್ನೂ ಓದಿ: ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!
Advertisement
ರಾಜಕೀಯ ಒತ್ತಡದಿಂದಾಗಿ ಕೊಲೆ ಯತ್ನ (307) ಕೇಸು ದಾಖಲಿಸಲಾಗಿದೆ. ಎಫ್‍ಐಆರ್ ದಾಖಲಾಗಿ ಎಷ್ಟೋ ಗಂಟೆಗಳ ಬಳಿಕ ಮತ್ತೊಂದು ಸೆಕ್ಷನ್ ಸೇರಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸದೇ ಬಾಹ್ಯ ಒತ್ತಡಕ್ಕೆ ಮಣಿದು ಈ ಪ್ರಕರಣ ದಾಖಲಿಸಿರುವುದು ತಪ್ಪು ಎಂದು ಪೊಲೀಸರ ಕ್ರಮವನ್ನು ಪ್ರಶ್ನಿಸಿ ಆರೋಪಿ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ರೌಡಿ ನಲಪಾಡ್ ಪ್ರಕರಣಕ್ಕೆ ಆರಂಭದಲ್ಲೇ ಸಮಾಧಿ ಕಟ್ಟಲು ಮುಂದಾದ ಪೊಲೀಸರು!
Advertisement
ಮುಂದೇನು?
ಪ್ರಕರಣ ಈಗ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಿಂದ ಸಿಸಿಬಿಗೆ ವರ್ಗಾವಣೆಯಾಗಿದೆ. ಆದರೆ ಸಿಸಿಬಿ ಪೊಲೀಸರು ಇನ್ನೂ ವಿಚಾರಣೆ ಆರಂಭಿಸಿಲ್ಲ. ಅಷ್ಟೇ ಅಲ್ಲದೇ ಕಬ್ಬನ್ ಪಾರ್ಕ್ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸಿದ್ದಾರೆ ಹೊರತು ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ವಿದ್ವತ್ ಅವರ ಹೇಳಿಕೆಯನ್ನು ಪಡೆದಿಲ್ಲ. ಹೀಗಾಗಿ ವಿದ್ವತ್ ಅವರ ಹೇಳಿಕೆಯನ್ನು ಪಡೆಯಬೇಕಿದೆ. ಇದರ ಜೊತೆಯಲ್ಲೇ ನ್ಯಾಯಾಂಗ ಬಂಧನದಲ್ಲಿರುವ ನಲಪಾಡ್ ನನ್ನು ಬಾಡಿ ವಾರಟ್ ಮೇಲೆ ಕರೆತಂದು ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇದನ್ನೂ ಓದಿ: ನನ್ನ ಸೋದರನಿಗೆ ನೋವಾದ್ರೆ, ನನಗೂ ನೋವಾಗುತ್ತೆ- ವಿದ್ವತ್‍ಗೆ ನ್ಯಾಯ ದೊರಕಬೇಕೆಂದು ಒತ್ತಾಯಿಸಿದ ಗುರು ರಾಜ್‍ಕುಮಾರ್
Advertisement
ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿದೆ?
ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ. ಇದನ್ನೂ ಓದಿ: ಮೈಮೇಲೆ ಕುರ್ಚಿಗಳನ್ನು ಎಸೆದ್ರು, sorry ಎಂದರೂ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದ್ರು- ನಲಪಾಡ್ ದಾಳಿ ಬಗ್ಗೆ ವಿದ್ವತ್ Exclusive ಮಾತು
https://www.youtube.com/watch?v=B-erXK9nl1M
https://www.youtube.com/watch?v=TIPtfcxi6O4
https://www.youtube.com/watch?v=vgXGeYC-QqU
https://www.youtube.com/watch?v=ETcXE9RXvXE
https://www.youtube.com/watch?v=bLWKOszy0uc