ಯಾದಗಿರಿ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ (Congress Office) ಬೆಂಕಿಯಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯಾದಗಿರಿ ನಗರ (Yadagiri) ಪೊಲೀಸರು ರೌಡಿಶೀಟರ್ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ರೌಡಿಶೀಟರ್ ಬಾಬುಗೌಡ ಅಗತೀರ್ಥ ಹಾಗೂ ಜಿಲ್ಲಾ ಮಹಿಳಾ ಘಟಕದ ಮಾಜಿ ಅಧ್ಯಕ್ಷೆಯ ಪತಿ ಶಂಕರ್ ಗೂಳಿ ಎಂದು ಗುರುತಿಸಲಾಗಿದ್ದು, ಆಂಧ್ರಪ್ರದೇಶದ ವಿಜಯವಾಡನಲ್ಲಿ ಬಂಧಿಸಲಾಗಿದೆ.ಇದನ್ನೂ ಓದಿ: ಪುಟಿನ್ ಹೆಲಿಕಾಪ್ಟರ್ ಗುರಿಯಾಗಿಸಿ ಉಕ್ರೇನ್ ಡ್ರೋನ್ ದಾಳಿ – ರಷ್ಯಾದ ಕಮಾಂಡರ್‌ಗೆ ಗಾಯ
ಆರೋಪಿ ರೌಡಿಶೀಟರ್ ಬಾಬುಗೌಡ ಅಗತೀರ್ಥ ಯಾದಗಿರಿ ಜಿಲ್ಲಾ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಮಂಜುಳಾ ಗೂಳಿಯ ಬೆಂಬಲಿಗನಾಗಿದ್ದ. ಮಂಜುಳಾ ಗೂಳಿ ಅವರಿಗೆ ಈ ಬಾರಿ ಅಧ್ಯಕ್ಷ ಸ್ಥಾನ ಕೈ ತಪ್ಪಿ ಹೋಗಿತ್ತು. ಹೀಗಾಗಿ ಇದೇ ಸಿಟ್ಟಿನಲ್ಲಿ ಮಂಜುಳಾ ಗೂಳಿ ಪತಿ ಶಂಕರ್ ಗೂಳಿ ಹಾಗೂ ರೌಡಿಶೀಟರ್ ಸೇರಿಕೊಂಡು ಮೇ 24ರಂದು ರಾತ್ರಿ 1 ಗಂಟೆ ಸುಮಾರಿಗೆ ಸ್ಕೂಟಿಯಲ್ಲಿ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು.
ಬೆಂಕಿಯಿಟ್ಟ ಬಳಿಕ ತಲೆಮರೆಸಿಕೊಂಡು, ಆಂಧ್ರಪ್ರದೇಶದ ವಿಜಯವಾಡದಲ್ಲಿ ತನ್ನ ಗೆಳೆಯನ ಮನೆಯಲ್ಲಿ ಅಡಗಿ ಕುಳಿತಿದ್ದ ಆರೋಪಿ ರೌಡಿಶೀಟರ್‌ನನ್ನು ಯಾದಗಿರಿ ನಗರ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಈಗಾಗಲೇ ಇನ್ನೋರ್ವ ಆರೋಪಿ ಶಂಕರ್‌ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಘಟನೆ ಏನು?
ಯಾದಗಿರಿ ನಗರದ ಕನಕ ವೃತ್ತದ ಬಳಿಯಿರುವ ಕಾಂಗ್ರೆಸ್ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಪರಿಣಾಮ ಕಚೇರಿಯಲ್ಲಿದ್ದ ಸೋಪಾ, ಎಸಿ ಎಲ್ಲವೂ ಸುಟ್ಟು ಭಸ್ಮವಾಗಿದ್ದವು. ಕಚೇರಿಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಡಾಗ್ ಸ್ಕ್ವಾಡ್, ಬೆರಳಚ್ಚು ತಜ್ಞರು ಸೇರಿ ಪರಿಶೀಲನೆ ನಡೆಸಿದ್ದರು.ಇದನ್ನೂ ಓದಿ: ಸರ್ಕಾರದ ಮೇಲೆ ಸುಳ್ಳು ಆರೋಪ – ಅದಕ್ಕೆ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್: ಹೆಚ್.ಕೆ ಪಾಟೀಲ್