ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ರೌಡಿಶೀಟರ್‌ನನ್ನು ನೇಮಕ ಮಾಡಲು ನಾನು ಶಿಫಾರಸು ಪತ್ರ ಕೊಟ್ಟಿಲ್ಲ ಎಂದು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದರು.ಇದನ್ನೂ ಓದಿ: ಸಮಗ್ರ ಅಭಿವೃದ್ಧಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸ್ಥಾಪನೆ: ದಿನೇಶ್ ಗುಂಡೂರಾವ್
ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ರೌಡಿಶೀಟರ್‌ನನ್ನು ಅಧ್ಯಕ್ಷನಾಗಿ ನೇಮಕ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆ ಮಾಡಿಕೊಂಡು ಆಯ್ಕೆ ಮಾಡಿಕೊಂಡಿದ್ದಾರೆ. ನಾನು ಯಾವುದೇ ಶಿಫಾರಸು ಪತ್ರ ಕೊಟ್ಟಿಲ್ಲ. ಆಯ್ಕೆ ಆಗಿರುವ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಸ್ಥಳೀಯ ಮುಖಂಡರ ಅಭಿಪ್ರಾಯದ ಮೇರೆಗೆ ಆಯ್ಕೆ ಆಗಿದೆ. ಈಗ ಆಗಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹೇಳಿದರು.
ಈಗ ಅಧ್ಯಕ್ಷರ ಬದಲಾವಣೆ ಆಗುವುದು ಕಷ್ಟ. ಒಂದು ಬಾರಿ ಚುನಾವಣೆ ಆದ ಮೇಲೆ ಸ್ಥಾನದಿಂದ ಕೆಳಗಿಳಿಸಲು ಆಗುವುದಿಲ್ಲ. ಆದರೂ ಕೂಡ ಈ ಬಗ್ಗೆ ಮುಜರಾಯಿ ಇಲಾಖೆ ಸಚಿವರ ಜೊತೆ ಮಾತನಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.ಇದನ್ನೂ ಓದಿ: ಜೈಶಂಕರ್, ಜೆ.ಪಿ ನಡ್ಡಾ ಸೇರಿ 25 ಪ್ರಮುಖರಿಗೆ ಭದ್ರತೆ ಹೆಚ್ಚಳ