ಬೆಂಗಳೂರು: ಬಿಕ್ಲು ಶಿವ ಕೊಲೆ (Biklu Shiva Murder Case) ಪ್ರಕರಣದಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಬೈರತಿ ಬಸವರಾಜ್‌ಗೆ (Byrati Basavaraj) ಬಂಧನ ಭೀತಿ ಎದುರಾಗಿದೆ.
ಬೈರತಿ ಬಸವರಾಜ್ ಅವರ ಬಂಧನ ಅಗತ್ಯವಿದೆ. ಈ ಹಿಂದಿನ ಆದೇಶ ತೆರವು ಮಾಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದೆ. ವಿಚಾರಣೆ ವೇಳೆ ಬೈರತಿ ಬಸವರಾಜ್ ಸುಳ್ಳು ಮಾಹಿತಿ ನೀಡಿದ್ದಾರೆ. ಈ ಪ್ರಕರಣದಲ್ಲಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಈಗ ಬೈರತಿ ಬಸವರಾಜ್ ಬಂಧಿಸಿ ವಿಚಾರಣೆಗೊಳಪಡಿಸಬೇಕಿದೆ ಎಂದು ಪ್ರಾಸಿಕ್ಯೂಷನ್ ಪರ ಎಸ್‌ಪಿಪಿ ಬಿ.ಎನ್.ಜಗದೀಶ್ ವಾದ ಮಂಡಿಸಿದ್ದಾರೆ. ಇದನ್ನೂ ಓದಿ: ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ – ನನಗೂ ಬೈರತಿ ಬಸವರಾಜ್‌ಗೂ ಸಂಬಂಧವಿಲ್ಲ ಎಂದ ಎ1 ಜಗ್ಗ
ಸಿಐಡಿ ಪೊಲೀಸರ ಅರ್ಜಿಗೆ ಬೈರತಿ ಬಸವರಾಜ್ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕಳೆದ ಒಂದು ತಿಂಗಳಿನಿAದ ವಿಚಾರಣೆಗೇ ಕರೆದಿಲ್ಲ. ಈ ಹಿಂದೆ ಪೊಲೀಸರು ಕರೆದಾಗಲೆಲ್ಲಾ ವಿಚಾರಣೆಗೆ ಸಹಕರಿಸಿದ್ದಾರೆ. ಈಗ ಬಂಧನದ ಅಗತ್ಯವಿದೆ ಎಂದು ಹೇಳುತ್ತಿದ್ದಾರೆ ಎಂದು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವುದಾಗಿ ಹಿರಿಯ ವಕೀಲ ಸಂದೇಶ್ ಚೌಟ ವಾದಿಸಿದ್ದಾರೆ.
ರಾಜಕೀಯ ದೃಷ್ಟಿಯಿಂದ ಕಿರುಕುಳ ನೀಡಬಾರದು. ಎಷ್ಟು ದಿನಗಳ ಕಸ್ಟಡಿ ಬೇಕೆಂದು ಕೋರ್ಟ್ಗೆ ತಿಳಿಸಿ ಎಸ್‌ಪಿಪಿಗೆ ನ್ಯಾ. ಎಂ.ಐ.ಅರುಣ್ ಅವರಿದ್ದ ಪೀಠ ಕೇಳಿದೆ. ಅ.8 ರೊಳಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್ – ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್