ಮಂಡ್ಯ: ಇತ್ತೀಚೆಗಷ್ಟೆ ಬಿಜೆಪಿ (BJP) ಪಕ್ಷ ಸೇರ್ಪಡೆಗೊಂಡಿದ್ದ ಫೈಟರ್ ರವಿ (Fighter Ravi) ವಿಚಾರ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ರೌಡಿಶೀಟರ್‌ಗಳನ್ನು (Rowdy Sheeter) ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷಗಳು ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದವು. ಇದರ ನಡುವೆ ಇದೀಗ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಫೈಟರ್ ರವಿ ಸಚಿವ ಹಾಗೂ ಶಾಸಕರೊಂದಿಗೆ ಕಾಣಿಸಿಕೊಂಡಿರುವುದು ಮತ್ತೊಂದು ವಿವಾದ ಸೃಷ್ಟಿಸಿದೆ.
Advertisement
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಶನಿವಾರ ನಡೆದ ಬಗುರ್ ಹುಕುಂ ಸಾಗುವಳಿ ಮಂಜೂರು ಪತ್ರ ವಿತರಣಾ ಕಾರ್ಯಕ್ರಮವನ್ನು ಜಿಲ್ಲಾಡಳಿತ ಆಯೋಜನೆ ಮಾಡಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ (K.Gopalaiah) ಹಾಗೂ ಶಾಸಕ ಸುರೇಶ್ ಗೌಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅವರ ಜೊತೆ ಫೈಟರ್ ರವಿ ಕೂಡ ವೇದಿಕೆ ಹಂಚಿಕೊಂಡಿದ್ದು ಬಿಜೆಪಿ ವಿರುದ್ಧ ಆಕ್ರೋಶ ಕೇಳಿ ಬರುತ್ತಿದೆ. ಜನಪ್ರತಿನಿಧಿ ಅಲ್ಲದಿದ್ದರು ಸರ್ಕಾರಿ ಕಾರ್ಯಕ್ರಮದಲ್ಲಿ ರೌಡಿಶೀಟರ್ ಎಂಬ ಕುಖ್ಯಾತಿ ಪಡೆದವ ಭಾಗವಹಿಸಿದ್ದು ಹೇಗೆ? ಭಾಗಿಯಾಗಿದ್ದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
Advertisement
Advertisement
ಈ ಹಿಂದೆ ಸೈಲೆಂಟ್ ಸುನೀಲ, ಫೈಟರ್ ರವಿ ಬಿಜೆಪಿ ಸೇರ್ಪಡೆ ವಿರೋಧ ಪಕ್ಷಗಳಿಗೆ ಆಹಾರವಾಗಿತ್ತು. ನಂತರ ರೌಡಿ ರಾಜಕೀಯ ಕೆಸರೆರಚಾಟ ರಾಜ್ಯ ರಾಜಕಾರಣದಲ್ಲಿ ವಾಗ್ಯುದ್ಧವನ್ನೇ ಸೃಷ್ಟಿಸಿತ್ತು. ಆ ವಿಷಯ ತಣ್ಣಗಾಗುತ್ತಿದ್ದ ವೇಳೆಯೇ ಫೈಟರ್ ರವಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿರೋದು ಮತ್ತಷ್ಟು ಸಂಚಲನ ಸೃಷ್ಟಿಸಿದೆ. ಅತ್ತ ಫೈಟರ್ ರವಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿಚಾರವನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸಮರ್ಥಿಸಿಕೊಂಡಿದ್ದಾರೆ. ಜನರಿಗೆ ಅನುಕೂಲವಾಗುವ ಕಾರ್ಯಕ್ರಮವಿದು, ಅವರು ನಮ್ಮ ಸ್ನೇಹಿತರು ಹಾಗಾಗಿ ಬಂದಿದ್ದಾರೆ ಎನ್ನುವ ಮೂಲಕ ಫೈಟರ್ ರವಿ ಪರ ಬ್ಯಾಟ್ ಬೀಸಿದ್ದಾರೆ.
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k