ನೆಲಮಂಗಲ: ಚಾಕು ಮತ್ತು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನು ಹತ್ಯೆ ಮಾಡಿರುವ ಘಟನೆ ನೆಲಮಂಗಲ (Nelamangala) ಬಳಿಯ ಬಾಲಾಜಿ ಫಾರಂ ಹೌಸ್‌ನಲ್ಲಿ ನಡೆದಿದೆ.
ಬೆಂಗಳೂರಿನ ಆಟೋ ನಾಗ (32) ಕೊಲೆಯಾದ ರೌಡಿಶೀಟರ್. ಈತನ ಮೇಲೆ ರೌಡಿಶೀಟರ್ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಹೈದರಾಬಾದ್‌ನ ಫರ್ನಿಚರ್ ಅಂಗಡಿ ಕಟ್ಟಡದಲ್ಲಿ ಬೆಂಕಿ ಅವಘಡ; ಇಬ್ಬರು ಮಕ್ಕಳು ಸೇರಿ 5 ಮಂದಿ ಸಾವು
ಬಾಲಾಜಿ ಫಾರಂ ಹೌಸ್‌ನ ರೂಮ್‌ನಲ್ಲಿ ಕೊಲೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಲಗ್ಗೆರೆ ಹಾಗೂ ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಆಟೋ ನಾಗ ಮೇಲೆ ರೌಡಿಶೀಟ್ ಓಪನ್ ಆಗಿತ್ತು. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

