ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಅಪರಾಧಗಳು ಹೆಚ್ಚಾಗುತ್ತಿದ್ದು, ಇದೀಗ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನನ್ನು ಕೊಲೆ ಮಾಡಲಾಗಿದೆ.
ಮುತ್ತುರಾಜ್ ಕೊಲೆಯಾದ ರೌಡಿಶೀಟರ್. ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ಹಸಿರುಹಳ್ಳಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಭಾನುವಾರ ರಾತ್ರಿ ಹಸಿರುಹಳ್ಳಿ ಗ್ರಾಮದ ಹೊರವಲಯದಲ್ಲಿ ದುಷ್ಕರ್ಮಿಗಳ ಬಂದು ಗುಂಪು ಗಲಾಟೆ ಮಾಡುತ್ತಿದ್ದರು.
ಈ ವೇಳೆ ರೌಡಿಶೀಟರ್ ಮುತ್ತುರಾಜ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ತ್ಯಾಮಗೊಂಡ್ಲು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮೃತ ಮುತ್ತುರಾಜ್ ಮೇಲೆ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳಿದ್ದವು. ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗೆ ಬಲೆ ಬೀಸಿದ್ದಾರೆ.