ಬೆಂಗಳೂರು: ಬೆಂಗಳೂರಿನ ವಸಂತನಗರದಲ್ಲಿ ಕುಖ್ಯಾತ ರೌಡಿಶೀಟರ್ ಕವಳನ ಬಾಮೈದ ರಾಕೇಶ್ ಕೊಲೆ ನಡೆದಿದ್ದು, ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ.
ಮೇ 18ರಂದು ನಡು ಬೀದಿಯಲ್ಲೇ ಐದು ಮಂದಿ ದುಷ್ಕರ್ಮಿಗಳು ರಾಕೇಶ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದು, ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Advertisement
ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ವಸಂತನಗರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 302 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
Advertisement
ವಿಚಾರಣೆಯ ವೇಳೆ ಪ್ರಕಾಶ್ ಎಂಬಾತ ಕೊಲೆಯ ಸೂತ್ರಧಾರ ಎನ್ನುವುದು ತಿಳಿದುಬಂದಿದೆ. ಮತ್ತೊಬ್ಬ ಆರೋಪಿಯ ಬಂಧನಕ್ಕೆ ಪೊಲೀಸರು ತಂಡವನ್ನು ರಚಿಸಿದ್ದಾರೆ. ಯಾವ ಕಾರಣಕ್ಕೆ ದುಷ್ಕøತ್ಯ ನಡೆಸಲಾಗಿದೆ ಎಂದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ತನಿಖೆಯನ್ನು ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
https://youtu.be/fKQCfVlBz2I