ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ವಾಹನ ಅಡ್ಡಗಟ್ಟಿ ಗಲಾಟೆ ಮಾಡುವ ಪ್ರಕರಣಗಳ ಸಂಖ್ಯೆ ಹೆಚ್ಚಾಗ್ತಿದ್ದಂತೆ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸ್ ಕಮಿಷನರ್ (Police Commissioner) ದಯಾನಂದ್ ಮಹತ್ವದ ಕ್ರಮ ಕೈಗೊಂಡಿದ್ದಾರೆ.
ರಸ್ತೆಯಲ್ಲಿ ಕಾರು, ಬೈಕ್ ಅಡ್ಡಗಟ್ಟಿ ಗಲಾಟೆ ಮಾಡುತ್ತಿರುವ ಪುಂಡರ ರೌಡಿಶೀಟ್ ಓಪನ್ ಮಾಡಿ ಕಠಿಣ ಕ್ರಮ ಕೈಗೊಳ್ಳುವ ಖಡಕ್ ಎಚ್ಚರಿಕೆಯನ್ನು ಕಮಿಷನರ್ ದಯಾನಂದ್ ನೀಡಿದ್ದಾರೆ. ಇದನ್ನೂ ಓದಿ: PFIಗೆ ಫಾರಿನ್ ಫಂಡಿಂಗ್ – ಮಂಗಳೂರಿನ ಮೂರು ಕಡೆ NIA ದಾಳಿ
Advertisement
Advertisement
ಇತ್ತೀಚೆಗಷ್ಟೇ ವೈಟ್‌ಫೀಲ್ಡ್ನ ಸಿದ್ದಾಪುರದಲ್ಲಿ ಇಬ್ಬರು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಗಲಾಟೆ ಮಾಡಿದ್ದರು. ಬೈಕ್‌ನಲ್ಲಿ ಬಂದ ಇಬ್ಬರು ಕಾರನ್ನು ಹಿಂಬಾಲಿಸಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ್ದ ವೀಡಿಯೋ ವೈರಲ್ ಆಗಿತ್ತು.
Advertisement
Advertisement
ಈ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಡೀಪುರ ಅರಣ್ಯ ಪ್ರದೇಶದಲ್ಕೂ ಇಂತಹದ್ದೇ ಘಟನೆಯೊಂದು ಬೆಳಕಿಗೆ ಬಂದಿತ್ತು. ಪದೇ ಪದೆ ಇಂತಹ ಕೃತ್ಯಗಳು ಬೆಳಕಿಗೆ ಬರುತ್ತಿರುವುದರಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಇದನ್ನೂ ಓದಿ: ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಹೈಕೋರ್ಟ್ ತಡೆಯಾಜ್ಞೆ – ಗಲಭೆಗೆ ಯತ್ನಿಸಿದ 30 ಜನರ ವಿರುದ್ಧ ಎಫ್‍ಐಆರ್
Web Stories