Connect with us

Bengaluru City

ಚಂದನ್ ಶೆಟ್ಟಿ ಕಂಠಸಿರಿಯಲ್ಲಿ ‘ರೌಡಿ ಬೇಬಿ’ ಹಾಡು

Published

on

ಸುಮುಖ ಎಂಟರ್ ಟೈನರ್ಸ್ ಹಾಗೂ ವಾರ್ ಫುಟ್ ಸ್ಟುಡಿಯೋಸ್ ಲಾಂಛನದಲ್ಲಿ ಎಸ್.ಎಸ್. ರವಿಗೌಡ ಹಾಗೂ ಶ್ಯಾಮಲಾ ರೆಡ್ಡಿ ಅವರು ನಿರ್ಮಿಸುತ್ತಿರುವ ‘ರೌಡಿ ಬೇಬಿ` ಚಿತ್ರಕ್ಕಾಗಿ ಡಾ. ವಿ.ನಾಗೇಂದ್ರ ಪ್ರಸಾದ್ ಅವರು ಬರೆದಿರುವ ‘ಸಾಗು ಮುಂದೆ ಸಾಗು ಈ ಭೂಮಿ ದೊಡ್ಡದು’ ಹಾಡನ್ನು ಖ್ಯಾತ ಗಾಯಕ ಚಂದನ್ ಶೆಟ್ಟಿ ಹಾಡಿದ್ದಾರೆ. ಅರ್ಮಾನ್ ಸಂಗೀತ ನೀಡಿದ್ದಾರೆ.

ರೆಡ್ಡಿ ಕೃಷ್ಣ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಮಂಗಳೂರು, ಕೇರಳ, ಬೆಂಗಳೂರು ಮುಂತಾದ ಕಡೆ ಮೂವತ್ತು ದಿನಗಳ ಚಿತ್ರೀಕರಣ ನಡೆದಿದೆ. ಈ ಹಿಂದೆ ‘ಪ್ರಯಾಣಿಕರ ಗಮನಕ್ಕೆ’ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದ ರೆಡ್ಡಿ ಕೃಷ್ಣ ಅವರು ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.

ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಡಾ. ವಿ.ನಾಗೇಂದ್ರ ಪ್ರಸಾದ್, ಸಿಂಪಲ್ ಸುನಿ, ಚೇತನ್ ಕುಮಾರ್ ಕಿನಾಲ್ ರಾಜ್ ಬರೆದಿದ್ದಾರೆ. ಸಾಮ್ರಾಟ್ ಛಾಯಾಗ್ರಹಣ, ಪ್ರಮೋದ್ ಸೋಮರಾಜ್ ಸಂಕಲನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಎರಡು ಸಾಹಸ ಸನ್ನಿವೇಶಗಳಿದ್ದು, ಚಂದ್ರು ಸಾಹಸ ನಿರ್ದೇಶನ ಮಾಡಿದ್ದಾರೆ. ಚೇತನ್ ಕುಮಾರ್ ಸಂಭಾಷಣೆ ಬರೆದಿದ್ದಾರೆ.

ನಿರ್ಮಾಪಕ ರವಿಗೌಡ ಅವರು ಈ ಚಿತ್ರದ ನಾಯಕರಾಗಿ ನಟಿಸಿದ್ದು, ಹೀರಕೌರ್, ದಿವ್ಯರಾವ್, ಅರುಣ ಬಾಲರಾಜ್, ಅಮಿತ್, ಕೆಂಪೇಗೌಡ, ಶ್ರೀನಾಥ್ ವಸಿಷ್ಠ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Click to comment

Leave a Reply

Your email address will not be published. Required fields are marked *