ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ – ಆರೋಪಿ ಜಗ್ಗ ದುಬೈಗೆ ಎಸ್ಕೇಪ್

Public TV
1 Min Read
Biklu Shiva Murder Case 1

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣದ (Biklu Shiva Murder Case) ಎ1 ಆರೋಪಿ ಜಗದೀಶ್ ಅಲಿಯಾಸ್ ಜಗ್ಗ ಹತ್ಯೆ ಬಳಿಕ ದುಬೈಗೆ ಎಸ್ಕೇಪ್ ಆಗಿದ್ದಾನೆ.

ಶಿವಪ್ರಕಾಶ್ ಕೊಲೆಯಾದ ಎರಡೇ ದಿನದಲ್ಲಿ ಜಗದೀಶ್ ಬೆಂಗಳೂರಿನಿಂದ ಚೆನ್ನೈಗೆ ಹೋಗಿ ಅಲ್ಲಿಂದ ದುಬೈಗೆ ಎಸ್ಕೇಪ್ ಆಗಿರುವ ಬಗ್ಗೆ ಅಧಿಕಾರಿಗಳಿಗೆ ದಾಖಲೆಗಳು ಸಿಕ್ಕಿವೆ. ಜಗದೀಶ್ ಪತ್ತೆಗಾಗಿ ನಾಲ್ಕು ವಿಶೇಷ ತಂಡಗಳು ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಕೇರಳದಲ್ಲಿ ತೀವ್ರ ಹುಡುಕಾಟ ನಡೆಸಿದೆ. ಇದನ್ನೂ ಓದಿ: ಮನೆಯಲ್ಲಿನ ಫ್ರಿಡ್ಜ್‌ ಸ್ಫೋಟ -ತಪ್ಪಿತು ಭಾರೀ ಅನಾಹುತ

ಕೊಲೆ ಪ್ರಕರಣದಲ್ಲಿ ಜಗದೀಶ್ ಬಂಧನವೇ ಅತಿಮುಖ್ಯವಾಗಿತ್ತು. ಈ ನಡುವೆ ಜಗದೀಶ್ ವಿದೇಶಕ್ಕೆ ಎಸ್ಕೇಪ್ ಆಗಿರೋದು ಪೊಲೀಸರ ತನಿಖೆಗೆ ಹಿನ್ನಡೆಯಾಗಿದೆ. ಜಗದೀಶ್ ಪತ್ತೆಗಾಗಿ ಪೊಲೀಸರು ಈಗಾಗಲೇ ಲುಕೌಟ್ ನೋಟಿಸ್ ಜಾರಿ ಮಾಡಿದ್ದು, ವಿದೇಶದಿಂದ ಕರೆಸಿಕೊಳ್ಳಲು ಕೇಂದ್ರ ಗೃಹ ಇಲಾಖೆಯಿಂದ ರೆಡ್ ಕಾರ್ನರ್ ನೋಟಿಸ್ ಜಾರಿಗೆ ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಜಗದೀಪ್ ಧನಕರ್ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಡಾ. ಶರಣಪ್ರಕಾಶ್ ಪಾಟೀಲ್

Share This Article