Bengaluru | ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಭೀಕರ ಹತ್ಯೆ

Public TV
1 Min Read
Kadugodi Rowdysheetar Murder copy

ಬೆಂಗಳೂರು: ರೌಡಿಶೀಟರ್‌ನನ್ನು (Rowdysheetar) ನಡು ರಸ್ತೆಯಲ್ಲಿ ಮಚ್ಚಿನಿಂದ ಮನಸೋ ಇಚ್ಛೆ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿ ತಲೆಮರಿಸಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಕಾಡುಗೋಡಿಯಲ್ಲಿ (Kadugodi) ನಡೆದಿದೆ.

ಪುನೀತ್ @ ನೇಪಾಳಿ ಪುನೀತ್ ಕೊಲೆಯಾದ ರೌಡಿಶೀಟರ್. ಕೊಲೆಯಾಗಿರುವ ಪುನೀತ್ ಕಾಡುಗೋಡಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದಾನೆ. ಕಾಡುಗೋಡಿ ಠಾಣೆ ರೌಡಿಶೀಟರ್ ಶ್ರೀಕಾಂತ್&ಟೀಂನಿಂದ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಶ್ರೀಕಾಂತ್ ಹಾಗೂ ರೌಡಿಶೀಟರ್ ಪುನೀತ್ ನಡುವೆ ಆಗಾಗ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ಆಗುತ್ತಿರುತ್ತಿತ್ತು. ಪುನೀತ್, ಶ್ರೀಕಾಂತ್‌ನನ್ನು ಕೊಲೆ ಮಾಡುವುದಾಗಿ ಎಲ್ಲರ ಮುಂದೆ ಹೇಳಿಕೊಂಡು ಓಡಾಡುತ್ತಿದ್ದ. ಅದನ್ನೇ ಶ್ರೀಕಾಂತ್ ಮನಸ್ಸಿನಲ್ಲಿ ಇಟ್ಟುಕೊಂಡಿದ್ದ. ಮಂಗಳವಾರ ರಾತ್ರಿ ಕಾಡುಗೋಡಿಯ ವಿಜಲಕ್ಷ್ಮೀ ಲೇಔಟ್ ಬಳಿ ಪುನೀತ್ ಇರುವಾಗ ಬೈಕ್‌ನಲ್ಲಿ ಬಂದ ನಾಲ್ವರು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಘಟನೆ ಸಂಬಂದ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share This Article