ಬೆಂಗಳೂರು: ಕಳೆದ ಬಾರಿ ಈಡನ್ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ (KKR) ವಿರುದ್ಧ 81 ರನ್‌ಗಳಿಂದ ಹೀನಾಯವಾಗಿ ಸೋತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇಂದು (ಏ.26) ತವರಿನಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್ ವಿರುದ್ಧ ಸೇಡು ತೀರಿಸಿಕೊಳ್ಳಲು ಕಾತರವಾಗಿದೆ.
Advertisement
31 ಪಂದ್ಯಗಳಲ್ಲಿ ಮುಖಾಮುಖಿಯಾಗಿರುವ ಇತ್ತಂಡಗಳ ಪೈಕಿ ಆರ್‌ಸಿಬಿ 14 ರಲ್ಲಿ ಗೆಲುವು ಸಾಧಿಸಿದ್ದರೆ, ಕೆಕೆಆರ್ 17 ಪಂದ್ಯಗಳಲ್ಲಿ ಜಯಗಳಿಸಿದೆ. 2023ರ ಆವೃತ್ತಿಯಲ್ಲಿ 7 ಪಂದ್ಯಗಳನ್ನಾಡಿರುವ ಆರ್‌ಸಿಬಿ 4 ರಲ್ಲಿ ಗೆದ್ದು, 8 ಅಂಕಗಳೊಂದಿಗೆ ಪ್ಲೆ ಆಫ್ ಕನಸು ಜೀವಂತವಿರಿಸಿಕೊಂಡಿದೆ. ಆದರೆ 7 ಪಂದ್ಯಗಳಲ್ಲಿ ಕೇವಲ 2 ಪಂದ್ಯ ಗೆದ್ದು 4 ಅಂಕ ಗಳಿಸಿರುವ ಕೆಕೆಆರ್ ಪ್ಲೆ ಆಫ್ ಹಾದಿ ಕಠಿಣವಾಗಿಸಿಕೊಂಡಿದೆ. ಉಳಿದ 7 ಪಂದ್ಯಗಳಲ್ಲಿ ಕನಿಷ್ಠ 6 ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ಇದನ್ನೂ ಓದಿ: IPL 2023: ಶಾರ್ದೂಲ್ ಬೆಂಕಿ ಬ್ಯಾಟಿಂಗ್, ವರುಣ್ ಮಿಂಚಿನ ಬೌಲಿಂಗ್ – RCBಗೆ ಹೀನಾಯ ಸೋಲು
Advertisement
Advertisement
KGF ಬಿಟ್ರೆ ಬ್ಯಾಟಿಂಗ್‌ನದ್ದೇ ಚಿಂತೆ:
ಆರ್‌ಸಿಬಿ ತಂಡ 7 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ 200ಕ್ಕೂ ಹೆಚ್ಚು ರನ್ ಗಳಿಸಿದೆ. ಅದರಲ್ಲೂ ಸಿಎಸ್‌ಕೆ (CSK) ವಿರುದ್ಧ ನಡೆದ ಪಂದ್ಯದಲ್ಲಿ ಚೇಸಿಂಗ್‌ನಲ್ಲಿ 218 ರನ್ ಸಿಡಿಸಿದ್ದು ವಿಶೇಷ. ಆದ್ರೆ ಆರ್‌ಸಿಬಿ ಪ್ರತಿ ಇನ್ನಿಂಗ್ಸ್‌ನಲ್ಲೂ KGF (ವಿರಾಟ್ ಕೊಹ್ಲಿ (Virat Kohli), ಗ್ಲೇನ್ ಮ್ಯಾಕ್ಸ್‌ವೆಲ್ ಹಾಗೂ ಫಾಫ್ ಡು ಪ್ಲೆಸಿಸ್) (Faf du Plessis) ಬ್ಯಾಟಿಂಗ್ ಆಧಾರ ಸ್ತಂಭವಾಗಿದ್ದಾರೆ. ಈ ಮೂವರನ್ನ ಬಿಟ್ಟರೆ, ಮಧ್ಯಮ ಕ್ರಮಾಂಕದಲ್ಲಿ ಸಂಪೂರ್ಣ ಬ್ಯಾಟಿಂಗ್ ವೈಫಲ್ಯ ಎದುರಿಸಬೇಕಾಗಿದೆ. ಕಳೆದ ಸೀಜನ್‌ನಲ್ಲಿ ಆರ್‌ಸಿಬಿ ಪರ ಅಬ್ಬರಿಸಿ ಟೀಂ ಇಂಡಿಯಾ ಟಿ20 ವಿಶ್ವಕಪ್ ತಂಡದಲ್ಲಿ ಚಾನ್ಸ್ ಗಿಟ್ಟಿಸಿಕೊಂಡಿದ್ದ ದಿನೇಶ್ ಕಾರ್ತಿಕ್ ಕಳಪೆ ಫಾರ್ಮ್‌ನಿಂದ ಟೀಕೆಗೆ ಗುರಿಯಾಗಿದ್ದಾರೆ.
Advertisement
ಇನ್ನೂ ಪ್ರತಿ ಪಂದ್ಯದಲ್ಲೂ ಆರಂಭಿಕರ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿರುವ ಕೆಕೆಆರ್ ಉತ್ತಮ ಸ್ಕೋರ್ ಗಳಿಸುತ್ತಿದೆಯಾದರೂ ಪಂದ್ಯ ಗೆಲುವು ಸಾಧಿಸುವಲ್ಲಿ ವಿಫಲವಾಗಿದೆ. ಹಾಗಾಗಿ ಈ ಪಂದ್ಯ ಇತ್ತಂಡಗಳಿಗೂ ನಿರ್ಣಾಯಕವಾಗಿದ್ದು, ಜಯ ಯಾರ ಪಾಲಿಕೆ ಒಲಿಯಲಿದೆ ಎಂಬುದನ್ನ ಕಾದು ನೋಡಬೇಕಿದೆ. ಇದನ್ನೂ ಓದಿ: ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪ್ರತಿಭಟನೆಗೆ ರಾಜಕೀಯ ಪಕ್ಷಗಳನ್ನು ಕರೆದ ಕುಸ್ತಿಪಟುಗಳು
ಈಡನ್ ಗಾರ್ಡನ್ ಅಂಗಳದಲ್ಲಿ ಕಳೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿತ್ತು. 205 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ ಕಳಪೆ ಬ್ಯಾಟಿಂಗ್‌ನಿಂದ 17.4 ಓವರ್‌ಗಳಲ್ಲೇ 123 ರನ್‌ಗಳಿಗೆ ಸರ್ವಪತನ ಕಂಡಿತ್ತು.