ಜೈಪುರ: ಮಹಾರಾಷ್ಟ್ರದ (Maharashtra0 ಪಾಲ್ಘರ್ ರೈಲ್ವೆ ನಿಲ್ದಾಣದ ಬಳಿ ಚಲಿಸುತ್ತಿದ್ದ ಜೈಪುರ-ಮುಂಬೈ ಎಕ್ಸ್‌ಪ್ರೆಸ್ (Jaipur-Mumbai Express) ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಪೇದೆ ಗುಂಡು (Bullet) ಹಾರಿಸಿದ್ದು, ಆರ್‌ಪಿಎಫ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳಗ್ಗಿನ ಜಾವ 5 ಗಂಟೆಯ ಸುಮಾರಿಗೆ ಜೈಪುರದಿಂದ ಮುಂಬೈಗೆ ರೈಲು ಚಲಿಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಪೇದೆ ಸಬ್ ಇನ್ಸ್ಪೆಕ್ಟರ್ ಜೊತೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದಾನೆ. ಈ ವೇಳೆ ರೈಲಿನಲ್ಲಿದ್ದ ಕೆಲ ಪ್ರಯಾಣಿಕರು ಅವರಿಬ್ಬರ ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೇದೆ ಕೋಪಗೊಂಡು ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮೂವರಿಂದ ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ – ಆರೋಪಿಗಳು ಅರೆಸ್ಟ್
Advertisement
Advertisement
ಆರೋಪಿ ಆರ್‌ಪಿಎಫ್ ಪೇದೆಯನ್ನು ಚೇತನ್ ಸಿಂಗ್ ಎಂದು ಗುರುತಿಸಲಾಗಿದ್ದು, ಘಟನೆಯ ಬಳಿಕ ರೈಲಿನಿಂದ ಜಿಗಿದು ಪರಾರಿಯಾಗಲು ಯತ್ನಿಸಿದ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: 5 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆಗೈದ ಪಾಪಿ
Advertisement
Web Stories