ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾ ಹಲವು ಭಾಷೆಗಳಲ್ಲಿ ರಿಲೀಸ್ ಆಗಿದೆ. ವಿಶ್ವದಾದ್ಯಂತ ಮೂರೇ ದಿನಕ್ಕೆ 500 ಕೋಟಿ ರೂಪಾಯಿ ಬಾಚಿದ್ದ ಈ ಸಿನಿಮಾ, ಹಿಂದಿಯಲ್ಲಂತೂ ಸಖತ್ ಕಮಾಯಿ ಮಾಡಿದೆ. ಕೇವಲ ನಾಲ್ಕೇ ದಿನಕ್ಕೆ ಹಿಂದಿಯಲ್ಲಿ ಅದು 100 ಕೋಟಿ ಕ್ಲಬ್ ಸೇರಿದೆ. ಅತೀ ಕಡಿಮೆ ಅವಧಿಯಲ್ಲಿ ನೂರು ಕೋಟಿ ಕ್ಲಬ್ ಸೇರಿದ ದಕ್ಷಿಣದ ಮೊದಲ ಸಿನಿಮಾ ಇದಾಗಿದೆ. ಇದನ್ನೂ ಓದಿ: ‘Lockup’ ಶೋಗೆ ಬರುವಂತೆ ವಿಲ್ ಸ್ಮಿತ್‍ಗೆ ಆಫರ್ ಕೊಟ್ಟ ಕ್ವಿನ್ ಕಂಗನಾ
Advertisement
ಮೊದಲ ದಿನ 19 ಕೋಟಿ, ಎರಡನೇ ದಿನ 24 ಕೋಟಿ, ಮೂರನೇ ದಿನ 31.5 ಕೋಟಿ ಮತ್ತು ನಾಲ್ಕನೇ ದಿನಕ್ಕೆ 17 ಕೋಟಿ ರೂಪಾಯಿಗಳ ಕೆಲಕ್ಷನ್ ಆಗಿದ್ದು, ಮಂಗಳವಾರ ನೂರು ಕೋಟಿಗೂ ಅಧಿಕ ಹಣ ಆರ್.ಆರ್.ಆರ್ ನಿರ್ಮಾಪಕರ ಜೇಬಿಗೆ ಬೀಳಲಿದೆ. ಇದನ್ನೂ ಓದಿ: ಏಪ್ರಿಲ್ 2ಕ್ಕೆ ಕಿಚ್ಚನ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್
Advertisement
Advertisement
ಮೂರು ದಿನದ ವಿಶ್ವದ ಲೆಕ್ಕಾಚಾರ
Advertisement
ವಿಶ್ವದಾದ್ಯಂತ ಈ ಸಿನಿಮಾ ರಿಲೀಸ್ ಆಗಿದ್ದು, ಕೇವಲ ಭಾರತದಲ್ಲಿ ಮಾತ್ರವಲ್ಲ, ವೀಕೆಂಡ್ ನಲ್ಲಿ ವಿದೇಶದಲ್ಲೂ ಸಖತ್ ಕಮಾಯಿ ಮಾಡಿದೆಯಂತೆ. ಇದೇ ವೇಗದಲ್ಲೇ ಒಂದು ವಾರ ಪ್ರದರ್ಶನ ಕಂಡರೆ, ಒಂದು ವಾರದಲ್ಲಿ ಸಾವಿರ ಕೋಟಿ ಹಣ ಗಳಿಸಿದ ಮೊದಲ ಚಿತ್ರ ಇದಾಗಲಿದೆ. ಇದನ್ನೂ ಓದಿ: ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ
ಈ ಸಿನಿಮಾ ಮೊದಲ ದಿನ ಕರ್ನಾಟಕದಲ್ಲಿ 14.5 ಕೋಟಿ ಗಳಿಕೆ ಮಾಡಿದ್ದರೆ, ಆಂಧ್ರ ಪ್ರದೇಶದಲ್ಲಿ 75 ಕೋಟಿ ಗಳಿಸಿತ್ತು. ತಮಿಳು ನಾಡಿನಲ್ಲಿ 10 ಕೋಟಿ, ಕೇರಳದಲ್ಲಿ 4 ಕೋಟಿ, ಹಿಂದಿಯಲ್ಲಿ 14 ಕೋಟಿ, ಉತ್ತರ ಭಾರತದಲ್ಲಿ 25 ಕೋಟಿ, ಹೀಗೆ ಭಾರತದಲ್ಲೇ ಮೊದಲ ದಿನ ಆರ್.ಆರ್.ಆರ್ ಗಳಿಸಿದ ಒಟ್ಟು ಮೊತ್ತ 156 ಕೋಟಿ ಆಗಿತ್ತು. ವಿದೇಶದಲ್ಲೂ ಕೂಡ ಹಿಂದೆ ಬಿದ್ದಿರಲಿಲ್ಲ. ಯುಎಸ್ ನಲ್ಲೇ 42 ಕೋಟಿ ಕಲೆಕ್ಷನ್ ಮಾಡಿತ್ತು. ಬೇರೆ ಬೇರೆ ದೇಶಗಳಿಂದ 25 ಕೋಟಿ ಬಂದಿತ್ತು. ವಿಶ್ವದಾದ್ಯಂತ ಮೊದಲ ದಿನದ ಒಟ್ಟು ಕಲೆಕ್ಷನ್ 223 ಕೋಟಿ ಆಗಿತ್ತು.