ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ಕನ್ನಡ ಇವೆಂಟ್ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ. ಮಾರ್ಚ್ 19ರಂದು ನಡೆಯಲಿರುವ ಈ ಇವೆಂಟ್ ಗಾಗಿ 100 ಎಕರೆ ಪ್ರದೇಶ ಸಿದ್ಧಗೊಳ್ಳುತ್ತಿದೆ. 2 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಸೇರಲಿರುವ ಈ ಕಾರ್ಯಕ್ರಮದಲ್ಲಿ ತೆಲುಗು, ತಮಿಳು ಮತ್ತು ಕನ್ನಡದ ಸ್ಟಾರ್ ನಟರು ಭಾಗಿಯಾಗುತ್ತಿರುವುದು ವಿಶೇಷ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಅಂಥದ್ದೇನಿದೆ ಸಿನಿಮಾದಲ್ಲಿ? ದಳ್ಳುರಿಯಲ್ಲಿ ದಹನದ ಕಥನ!
Advertisement
ಈ ಇವೆಂಟ್ ಅನ್ನು ಪುನೀತ್ ರಾಜ್ ಕುಮಾರ್ ಅವರಿಗೆ ಅರ್ಪಿಸಲು ಚಿತ್ರತಂಡ ನಿರ್ಧರಿಸಿದ್ದು, ಪುನೀತ್ ನೆನಪಿನಲ್ಲಿ ಹಲವು ಕಾರ್ಯಕ್ರಮಗಳು ಕೂಡ ನಡೆಯುತ್ತವೆ. ಇದರ ನೇತೃತ್ವವನ್ನು ಶಿವರಾಜ್ ಕುಮಾರ್ ಅವರಿಗೆ ವಹಿಸಲಾಗಿದೆಯಂತೆ. ಇದನ್ನೂ ಓದಿ : ಉಪೇಂದ್ರ ಅವರ ಹೊಸ ಸಿನಿಮಾದ ಪೋಸ್ಟರ್ : ಅಸಲಿನಾ? ನಕಲಾ?
Advertisement
Advertisement
ಸಿನಿಮಾ ರಂಗದ ಕಲಾವಿದರು ಮತ್ತು ತಂತ್ರಜ್ಞರು ಮಾತ್ರವಲ್ಲ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಹಾಗಾಗಿ ಎಲ್ಲ ರೀತಿಯ ಭದ್ರತೆಯನ್ನೂ ಮಾಡಿಕೊಳ್ಳಲಾಗುತ್ತಿದೆಯಂತೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್
Advertisement
ಈ ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್ ತೇಜ್, ಜ್ಯೂನಿಯರ್ ಎನ್.ಟಿ.ಆರ್, ಆಲಿಯಾ ಭಟ್, ಅಜಯ್ ದೇವಗನ್, ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಸೇರಿದಂತೆ ಚಿತ್ರತಂಡದ ಬಹುತೇಕ ಸದಸ್ಯರು ಕೂಡ ಅಂದು ಭಾಗಿಯಾಗಲಿದ್ದಾರೆ. ಮನರಂಜನೆ ಕಾರ್ಯಕ್ರಮ ಮತ್ತು ಚಿತ್ರತಂಡದೊಂದಿಗೆ ಸಂವಾದ ಕೂಡ ಈ ಸಂದರ್ಭದಲ್ಲಿ ಏರ್ಪಡಿಸಲಾಗಿದೆ.