ಹೈದರಾಬಾದ್: ರಾಜ್ಮೌಳಿ ನಿರ್ದೇಶನದ ಬಹುನೀರಿಕ್ಷಿತ ಆರ್ಆರ್ಆರ್ ಸಿನಿಮಾವನ್ನು ಮಾರ್ಚ್ 25ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಕೊರೊನಾ ಕಾರಣದಿಂದಾಗಿ ಬಿಡುಗಡೆ ದಿನಾಂಕವನ್ನು ಮುಂದೂಡುತ್ತಾ ಬಂದಿರುವ ಚಿತ್ರ ತಂಡ ಅಧಿಕೃತ ದಿನಾಂಕವನ್ನು ಪ್ರಕಟ ಮಾಡಿದೆ.
- Advertisement 2
ಜೂನಿಯರ್ ಎನ್ಟಿಆರ್ ಮತ್ತು ರಾಮ್ ಚರಣ್ ಅಭಿನಯದ ಆರ್ಆರ್ಆರ್ ಸಿನಿಮಾವು ಜನವರಿ 7ರಂದು ತೆರೆಗೆ ಬರಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಅದು ಸಾಧ್ಯವಾಗಲಿಲ್ಲ. ಈ ಮಧ್ಯೆ ಮಾರ್ಚ್ 18ರಂದು ಆರ್ಆರ್ಆರ್ ಸಿನಿಮಾವನ್ನು ತೆರೆಕಾಣಿಸಲು ಸಜ್ಜಾಗಿದ್ದರು ರಾಜಮೌಳಿ. ಆ ದಿನಾಂಕ ಹೊಂದಿಕೆಯಾಗದೇ ಇದ್ದರೆ ಏಪ್ರಿಲ್ 28ರ ಮೇಲೆ ಕಣ್ಣಿಟ್ಟಿದ್ದರು. ಇದೀಗ ಅವರೆಡನ್ನೂ ಬಿಟ್ಟು ಹೊಸ ರಿಲೀಸ್ ಡೇಟ್ ಫೈನಲ್ ಮಾಡಲಾಗಿದೆ. ಮಾರ್ಚ್ 25ರಂದು ಆರ್ಆರ್ಆರ್ ರಿಲೀಸ್ ಆಗೋದು ಖಚಿತ ಎಂದು ಚಿತ್ರತಂಡ ಅಧಿಕೃತ ಹೇಳಿಕೆ ನೀಡಿದೆ.
- Advertisement 3
#RRRonMarch25th, 2022… FINALISED! ???????? #RRRMovie pic.twitter.com/hQfrB9jrjS
— RRR Movie (@RRRMovie) January 31, 2022
- Advertisement 4
ರಾಮ್ ಚರಣ್ ತೇಜಾ, ಜೂ.ಎನ್ಟಿಆರ್ ಅಭಿನಯಿಸಿರುವ ನಿರ್ದೇಶಕ ರಾಜಮೌಳಿ ಸಾರಥ್ಯದಲ್ಲಿ ಬಹು ಕೋಟಿ ವೆಚ್ಚದಲ್ಲಿ ತಯಾರಾಗಿರುವ ಸಿನಿಮಾವಾಗಿದೆ. ಬಾಲಿವುಡ್ನ ಖ್ಯಾತ ನಟಿ ಆಲಿಯಾ ಭಟ್ ಅವರು ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ನಟ ಅಜಯ್ ದೇವಗನ್ ಕೂಡ ಈ ಸಿನಿಮಾದಲ್ಲಿ ಮುಖ್ಯ ಪಾತ್ರ ನಿಭಾಯಿಸಿದ್ದಾರೆ. ಈಗಾಗಲೇ ಆರ್ಆರ್ಆರ್ ಚಿತ್ರತಂಡ ಸಿನಿಮಾ ಕುರಿತಂತೆ ಭರ್ಜರಿಯಾಗಿ ಪ್ರಮೋಷನ್ ನಡೆಸಿದ್ದು, ಚಿತ್ರ ನೋಡಲು ಅಭಿಮಾನಿಗಳು ಸಾಕಷ್ಟು ಕಾತುರದಿಂದ ಕಾಯುತ್ತಿದ್ದಾರೆ.