ರಷ್ಯಾ ಹಾಗೂ ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧ ವಿಶ್ವವನ್ನೇ ಆತಂಕಕ್ಕೆ ದೂಡಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ಮೇಲೆ ಯುದ್ಧವನ್ನು ಘೋಷಿಸಿದ್ದಾರೆ. ಈ ವಿಚಾರವಾಗಿ ಯಾರಾದರೂ ಮಧ್ಯಪ್ರವೇಶಿಸಿದರೆ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಇತರ ದೇಶಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಉಕ್ರೇನ್‍ನ ಕೈವ್, ಖಾರ್ಕಿವ್ ಮತ್ತು ಇತರ ಪ್ರದೇಶಗಳಲ್ಲಿ ದೊಡ್ಡ ಸ್ಫೋಟಗಳು ಸಂಭವಿಸಿವೆ. ಸಾಮಾನ್ಯವಾಗಿ ಸಿನಿಮಾ ಶೂಟಿಂಗ್ ನಡೆಸಲು ಉಕ್ರೇನ್ ಸಾಕಷ್ಟು ಫೇಮಸ್ ಪ್ಲೇಸ್‍ಗಳಿದ್ದು, ಉಕ್ರೇನ್‍ನಲ್ಲಿ ಭಾರತದ ಹಲವಾರು ಸಿನಿಮಾಗಳನ್ನು ಚಿತ್ರೀಕರಿಸಲಾಗಿದೆ. ಇದನ್ನೂ ಓದಿ : ಮಾಜಿ ಸಿಎಂ ಸಿದ್ಧರಾಮಯ್ಯಗೆ ಹೆದರಿಸಿದ ಬಿಗ್ ಬಾಸ್ ಪ್ರಥಮ್
RRR
ಕಳೆದ ವರ್ಷ ಆಗಸ್ಟ್‌ನಲ್ಲಿ ರಾಮ್ ಚರಣ್ ಮತ್ತು ಜೂನಿಯರ್ ಎನ್‍ಟಿಆರ್ ಅಭಿನಯದ ಬಹು ನಿರೀಕ್ಷಿತ ಆರ್‌ಆರ್‌ಆರ್ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಉಕ್ರೇನ್‍ನಲ್ಲಿ ನಡೆಸಲಾಗಿತ್ತು. ಎಸ್‍ಎಸ್ ರಾಜಮೌಳಿ ನಿರ್ದೇಶನದ ಈ ಚಿತ್ರದಲ್ಲಿ ಜ್ಯೂನಿಯರ್ ಎನ್‍ಟಿಆರ್, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್, ಸಮುದ್ರಕನಿ, ರೇ ಸ್ಟೀವನ್ಸನ್, ಅಲಿಸನ್ ಡೂಡಿ, ಶ್ರಿಯಾ ಸರನ್ ಮತ್ತು ಒಲಿವಿಯಾ ಮೋರಿಸ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆರ್‌ಆರ್‌ಆರ್ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರಾದ ಕೋಮರಂ ಭೀಮ್ ಮತ್ತು ಅಲ್ಲೂರಿ ಸೀತಾರಾಮ ರಾಜು ಅವರ ಕಾಲ್ಪನಿಕ ಕಥಾಹಂದರವಾಗಿದೆ.
Team #RRRMovie arrives in #Ukraine for the last schedule of the film… Excited????????????????
— RRR Movie (@RRRMovie) August 3, 2021
99 ಸಾಂಗ್ಸ್
’99 ಸಾಂಗ್ಸ್’ ಸಿನಿಮಾ ನಿರ್ಮಾಣ ಮಾಡಿರುವ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್, ಈ ಸಿನಿಮಾದ ಹಾಡುಗಳನ್ನು ಉಕ್ರೇನ್‍ನಲ್ಲಿ ಚಿತ್ರೀಕರಣ ಮಾಡಿದ್ದಾರೆ. ಐಡಿಯಲ್ ಎಂಟರ್‍ಟೈನ್‍ಮೆಂಟ್ ಜೊತೆಗೆ ವೈಎಂ ಮೂವೀಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ. 99 ಸಾಂಗ್ಸ್ ಅನ್ನು ಭಾರತದಲ್ಲಿ ಮತ್ತು ಉಕ್ರೇನ್‍ನಲ್ಲಿ ಚಿತ್ರೀಕರಣ ನಡೆಸಲಾಗಿತ್ತು. 99 ಸಾಂಗ್ಸ್‍ನ ಆರಂಭದಲ್ಲಿ ಇಹಾನ್ ಭಟ್ ಮತ್ತು ಎಡಿಲ್ಸಿ ವರ್ಗಾಸ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜೊತೆಗೆ ಆದಿತ್ಯ ಸೀಲ್, ಲೀಸಾ ರೇ ಮತ್ತು ಮನಿಶಾ ಕೊಯಿರಾಲಾ ಪೋಷಕ ಪಾತ್ರಗಳಲ್ಲಿದ್ದಾರೆ.
2.0
ಕಾಲಿವುಡ್ ನಟ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಆಮಿ ಜಾಕ್ಸನ್ ಅಭಿನಯದ 2.0 ಸಿನಿಮಾದ ಸಾಂಗ್ ಶೂಟಿಂಗ್ ಉಕ್ರೇನ್‍ನ ಟನಲ್ ಆಫ್ ಲವ್‍ನಲ್ಲಿ ಚಿತ್ರೀಕರಿಸಲಾಗಿತ್ತು. ಈ ಸಿನಿಮಾದ ರೋಜಾ ಕಾದಲ್ ಎಂಬ ಹಾಡನ್ನು ಎ.ಆರ್ ರೆಹಮಾನ್ ಸಂಯೋಜಿಸಿದ್ದಾರೆ. ಇನ್ನೂ ಈ ಸಾಂಗ್‍ನಲ್ಲಿ ಬರುವ ಉಕ್ರೇನ್ ದೃಶ್ಯಗಳು ಬಹಳ ಅದ್ಭುತವಾಗಿ ಮೂಡಿಬಂದಿದೆ. ಇದನ್ನೂ ಓದಿ : ಅಶರೀರವಾಣಿ ಆಲ್ಬಂಗೆ ನೀನಾಸಂ ಸತೀಶ್ ಸಿಂಗರ್ : ಮಗಳೊಂದಿಗೆ ಹಾಡಿದ ಸ್ಟಾರ್ ನಟ
ದೇವ್
ದೇವ್ ರಜತ್ ರವಿಶಂಕರ್ ಬರೆದು ನಿರ್ದೇಶಿಸಿರುವ 2019ರ ತಮಿಳಿನ ರೋಮ್ಯಾಂಟಿಕ್ ಆ್ಯಕ್ಷನ್ ಸಿನಿಮಾವಾಗಿದೆ. ಚಿತ್ರದಲ್ಲಿ ಕಾರ್ತಿಕ್ ಮತ್ತು ರಾಕುಲ್ ಪ್ರೀತ್ ಸಿಂಗ್ ನಟಿಸಿದ್ದಾರೆ. ಪ್ರಕಾಶ್ ರಾಜ್ ಮತ್ತು ರಮ್ಯಾ ಕೃಷ್ಣನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರದ ಕಥಾವಸ್ತುವು ಮಾಜಿ ಭಾರತೀಯ ಕ್ರಿಕೆಟ್ ನಾಯಕ ಮತ್ತು ಸ್ಟಾರ್ ಆಲ್ ರೌಂಡರ್ ಕಪಿಲ್ ದೇವ್ ಅವರ ಜೀವನ ಪ್ರೇರಿತವಾಗಿದೆ. ಇನ್ನು ಈ ಸಿನಿಮಾದ ಶೂಟಿಂಗ್ ದೃಶ್ಯಗಳನ್ನು ಚೆನ್ನೈ, ಹೈದರಾಬಾದ್, ಬೆಂಗಳೂರು, ಮುಂಬೈ, ಪುಣೆ, ಕುಲು, ಮನಾಲಿ, ಹಿಮಾಲಯ, ಗುಲ್ಮಾರ್ಗ್, ಉಕ್ರೇನ್ ಮತ್ತು ಕಾರ್ಪಾಥಿಯನ್ ಪರ್ವತಗಳಂತಹ ಪ್ರದೇಶಗಳಲ್ಲಿ ಚಿತ್ರೀಕರಿಸಲಾಗಿದೆ. 2018ರ ನವೆಂಬರ್ ಆರಂಭದಲ್ಲಿ ಉಕ್ರೇನ್‍ನಲ್ಲಿ ಚಿತ್ರೀಕರಣ ಮಾಡಲಾಯಿತು.
ವಿನ್ನರ್
ವಿನ್ನರ್ 2017ರಲ್ಲಿ ತೆರೆಕಂಡ ತೆಲುಗಿನ ಆ್ಯಕ್ಷನ್, ಕಾಮಿಡಿ ಸಿನಿಮಾವಾಗಿದ್ದು, ಶ್ರೀ ಲಕ್ಷ್ಮಿ ನರಸಿಂಹ ಪ್ರೊಡಕ್ಷನ್ಸ್ ಮತ್ತು ಲಿಯೋ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ನಲ್ಲಮಲುಪು ಬುಜ್ಜಿ, ಟ್ಯಾಗೋರ್ ಮಧು ಜಂಟಿಯಾಗಿ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದರು. ನಿರ್ದೇಶಕ ಗೋಪಿಚಂದ್ ಮಲಿನೇನಿ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾದಲ್ಲಿ ಸಾಯಿ ಧರಮ್ ತೇಜ್, ರಾಕುಲ್ ಪ್ರೀತ್ ಸಿಂಗ್ ಮತ್ತು ಜಗಪತಿ ಬಾಬು ನಟಿಸಿದ್ದಾರೆ. ಇದರ ಶೂಟಿಂಗ್ ಸ್ಥಳಗಳಲ್ಲಿ ಕೈವ್, ಎಲ್ವಿವ್ ಮತ್ತು ಇಸ್ತಾನ್‍ಬುಲ್‍ನಲ್ಲಿ ಚಿತ್ರೀಕರಿಸಲಾಗಿದೆ.
ಈ ಚಿತ್ರತಂಡವು ಉಕ್ರೇನ್‍ನಲ್ಲಿ ಮೂರು ಹಾಡುಗಳನ್ನು ಚಿತ್ರೀಕರಿಸಿದೆ. ವಿನ್ನರ್ ಸಿನಿಮಾ ಉಕ್ರೇನ್‍ನಲ್ಲಿ ಚಿತ್ರೀಕರಿಸಲಾದ ಮೊದಲ ಭಾರತೀಯ ಚಲನಚಿತ್ರವಾಗಿದೆ ಎಂದು ನಿರ್ದೇಶಕ ಗೋಪಿಚಂದ್ ಮಲಿನೇನಿ ಹೇಳಿದ್ದಾರೆ.