ಹೈದರಾಬಾದ್: ಟಾಲಿವುಡ್ ನಟ ಜ್ಯೂನಿಯರ್ ಎನ್‍ಟಿಆರ್ ಹಾಗೂ ನಟ ರಾಮ್ ಚರಣ್ ತೇಜ ಅಭಿನಯದ ಬಹುನಿರೀಕ್ಷಿತ ಆರ್‌ಆರ್‌ಆರ್ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.
Advertisement
ನಿರ್ದೇಶಕ ರಾಜಮೌಳಿ ಸಾರಥ್ಯದಲ್ಲಿ ಬಹು ಕೋಟಿ ವೆಚ್ಚದಲ್ಲಿ ತಯಾರಾಗಿರುವ ಆರ್‌ಆರ್‌ಆರ್ ಸಿನಿಮಾ 2022ರ ಜನವರಿ 7ರಂದು ಐದು ಭಾಷೆಗಳಲ್ಲಿ ತೆರೆ ಕಾಣಬೇಕಾಗಿತ್ತು. ಆದರೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಇದೀಗ ಆರ್‌ಆರ್‌ಆರ್ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎನ್ನಲಾಗುತ್ತಿದೆ.
Advertisement
Advertisement
ತಮಿಳುನಾಡು, ದೆಹಲಿ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ನಿರ್ಬಂಧ ವಿಧಿಸಲಾಗಿದ್ದು, ಬೆಂಗಳೂರಿನಲ್ಲಿಯೂ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಪಕರು ಚಿತ್ರ ಬಿಡುಗಡೆಗೊಳಿಸದಿರಲು ತೀರ್ಮಾನಿಸಿದ್ದಾರೆ. ಈಗಾಗಲೇ ಆರ್‌ಆರ್‌ಆರ್ ಚಿತ್ರತಂಡ ಸಿನಿಮಾ ಕುರಿತಂತೆ ಭರ್ಜರಿಯಾಗಿ ಪ್ರಮೋಷನ್ ನಡೆಸಿದ್ದು, ಚಿತ್ರ ನೋಡಲು ಅಭಿಮಾನಿಗಳು ಸಾಕಷ್ಟು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡುವುದನ್ನು ಬಿಟ್ಟು ನಿರ್ಮಾಪಕರಿಗೆ ಬೇರೆ ದಾರಿ ಇಲ್ಲದಂತಾಗಿದೆ. ಇದನ್ನೂ ಓದಿ: ಹೊಸ ವರ್ಷವನ್ನು ಅದ್ದೂರಿಯಾಗಿ ಆಚರಿಸಿದ ದಕ್ಷಿಣ ಭಾರತದ ಸಿನಿ ತಾರೆಯರು
Advertisement
ಬೆಂಗಳೂರಿನಲ್ಲಿ ಆರ್‌ಆರ್‌ಆರ್ ಚಿತ್ರದ ಪ್ರಿರಿಲೀಸ್ ಇವೆಂಟ್ ಜನವರಿ 2ಕ್ಕೆ ನಿಗದಿಯಾಗಿತ್ತು. ಆದರೆ ಬೆಂಗಳೂರಿನಲ್ಲಿಯೂ ಕೊರೊನಾ ಹೆಚ್ಚಾಗುತ್ತಿರುವ ಕಾರಣ ಪ್ರಮೋಷನ್ ಕಾರ್ಯಕ್ರಮವನ್ನು ಚಿತ್ರತಂಡ ಮೊಟಕುಗೊಳಿಸಿದೆ. ಕೊರೊನಾ ಏರಿಕೆಯ ಪರಿಸ್ಥಿತಿ ನೋಡಿಕೊಂಡು ಆರ್‌ಆರ್‌ಆರ್ ರಿಲೀಸ್ ದಿನಾಂಕ ಘೋಷಿಸುವ ಸಾಧ್ಯತೆ ಇದೆ. ಸದ್ಯ ಆರ್‌ಆರ್‌ಆರ್ ಬಿಡುಗಡೆ ದಿನಾಂಕವನ್ನು ಎರಡು ತಿಂಗಳು ಮುಂದೂಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಈ ತಿಂಗಳು ಆರ್‌ಆರ್‌ಆರ್ ಹಾಗೂ ರಾಧೆಶ್ಯಾಮ್ ಸೇರಿದಂತೆ ಅನೇಕ ಚಿತ್ರಗಳು ರಿಲೀಸ್ ಆಗಬೇಕಿತ್ತು. ಆದರೆ ಈಗ ಸಿನಿಮಾ ಬಿಡುಗಡೆಯಾಗದ ಹಿನ್ನೆಲೆ ಮಾರ್ಚ್ ಹಾಗೂ ಏಪ್ರಿಲ್‍ನಲ್ಲಿ ಬಿಗ್ ಸ್ಟಾರ್ ಸಿನಿಮಾಗಳು ಕ್ಲ್ಯಾಶ್ ಆಗುವುದು ಪಕ್ಕಾ ಎಂದೇ ಹೇಳಬಹುದು. ಇದನ್ನೂ ಓದಿ: ಬೋಲ್ಡ್ ಲುಕ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ ದಿಶಾ ಪಟಾನಿ