Connect with us

Cinema

ದೀಪಿಕಾ ಪಡುಕೋಣೆ, ಪದ್ಮಾವತಿ ನಿರ್ದೇಶಕರ ಶಿರಚ್ಛೇದ ಮಾಡಿದ್ರೆ 10 ಕೋಟಿ ರೂ.- ಬಿಜೆಪಿ ನಾಯಕ

Published

on

Share this

ನವದೆಹಲಿ: ಬಾಲಿವುಡ್‍ನ ಪದ್ಮಾವತಿ ಸಿನಿಮಾ ಬಿಡುಗಡೆಗೆ ವಿರೋಧದ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಟಿ ದೀಪಿಕಾ ಪಡುಕೋಣೆ ಹಾಗೂ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಯ ಶಿರಚ್ಛೇದ ಮಾಡಿದವರಿಗೆ 10 ಕೋಟಿ ರೂ. ಬಹುಮಾನ ನೀಡುತ್ತೇವೆ ಎಂದು ಹರಿಯಾಣದ ಬಿಜೆಪಿಯ ನಾಯಕ ಘೋಷಣೆ ಮಾಡಿದ್ದಾರೆ.

ಹರಿಯಾಣದ ಬಿಜೆಪಿ ಮಾಧ್ಯಮ ಘಟಕದ ಮುಖ್ಯಸ್ಥ ಸೂರಜ್ ಪಾಲ್ ಅಮು, ನಟಿ ದೀಪಿಕಾ ಹಾಗೂ ನಿರ್ದೇಶಕ ಬನ್ಸಾಲಿ ಅವರ ಶಿರಚ್ಛೇದ ಮಾಡಿದವರಿಗೆ 10 ಕೋಟಿ ರೂ. ಕೊಡುವುದಾಗಿ ಘೋಷಿಸಿದ್ದಾರೆ. ಅಷ್ಟೇ ಅಲ್ಲದೇ ಚಿತ್ರದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಪಾತ್ರವನ್ನು ಮಾಡಿರುವ ರಣ್ವೀರ್ ಸಿಂಗ್ ನ ಕಾಲುಗಳನ್ನು ಮುರಿಯುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಇತ್ತೀಚೆಗಷ್ಟೇ ದೀಪಿಕಾ ಅವರ ಮೂಗು ಕತ್ತರಿಸಿದರೆ 5 ಕೋಟಿ ರೂ. ಕೊಡುವುದಾಗಿ ಮೀರುತ್‍ನ ವ್ಯಕ್ತಿಯೊಬ್ಬರು ಹೇಳಿದ್ದರು. ನಾವು ಕಾನೂನನ್ನು ಕೈಗೆ ತೆಗೆದುಕೊಳ್ಳುವುದಿಲ್ಲ. ಆದರೆ ನಮ್ಮ ಸಹೋದರಿಯರು ಮತ್ತು ಪುತ್ರಿಯರ ಮೇಲೆ ಯಾರಾದರೂ ಕಣ್ಣು ಹಾಕಿದರೆ ಸುಮ್ಮನೆ ಬಿಡುತ್ತೇವಾ ಎಂದು ಆಕ್ರೋಶದಿಂದ ಬೆದರಿಗೆ ಹಾಕುವಂತಹ ಮಾತನ್ನು ಹೇಳಿದ್ದಾರೆ.

ಪದ್ಮಾವತಿ ಸಿನಿಮಾ ಸೆಟ್ಟೇರಿದಾಗಿನಿಂದಲೂ ವಿವಾದದಿಂದ ಮುಕ್ತವಾಗಿಲ್ಲ. ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಮಾತ್ತುಪದ್ಮಾವತಿ ನಡುವೆ ರೊಮ್ಯಾಂಟಿಕ್ ಸೀನ್ ಗಳಿವೆ. ಇನ್ನೂ ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ.

ಅಷ್ಟೇ ಅಲ್ಲದೆ ಸೆನ್ಸಾರ್ ಬೋರ್ಡ್ ಸಿನಿಮಾಗೆ ಅನುಮತಿ ಕೋರಿ ಚಿತ್ರತಂಡ ಅರ್ಜಿಯನ್ನು ಸಲ್ಲಿಸಿತ್ತು. ಆದರೆ ಚಿತ್ರತಂಡ ಅವಶ್ಯಕ ಮಾಹಿತಿಯನ್ನು ಅರ್ಜಿಯಲ್ಲಿ ದಾಖಲಿಸದೇ ಅಪೂರ್ಣವಾದ ಮಾಹಿತಿಯನ್ನು ಸಲ್ಲಿಸಿದೆ. ಸಿನಿಮಾದಲ್ಲಿ ಬಳಸಲಾಗಿರುವ ದೃಶ್ಯಗಳಿಗೆ ಸೂಕ್ತ ಸಾಕ್ಷ್ಯಗಳನ್ನು ನೀಡಿಲ್ಲ ಎಂದು ಸೆನ್ಸಾರ್ ಬೋರ್ಡ್ (ಸಿಬಿಎಫ್‍ಸಿ) ತಿಳಿಸಿ ಅರ್ಜಿಯನ್ನು ತಿರಸ್ಕರಿಸಿದೆ.

ಆದ್ರೆ ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಮತ್ತು ಪದ್ಮಾವತಿ ನಡುವೆ ಯಾವುದೇ ರೊಮ್ಯಾಂಟಿಕ್ ಸೀನ್ ಗಳಿಲ್ಲ ಎಂದು ನಿರ್ದೇಶಕ ಬನ್ಸಾಲಿ ಸ್ಪಷ್ಟನೆ ನೀಡಿದ್ದಾರೆ.

 

 

Click to comment

Leave a Reply

Your email address will not be published. Required fields are marked *

Advertisement