ಚಿಕ್ಕಮಗಳೂರು: ಆಗಸ್ಟ್ 1 ರಿಂದ ಸೆಪ್ಟೆಂಬರ್ 1 ರವರೆಗೆ ಒಂದು ತಿಂಗಳ ಕರೆಂಟ್ ಬಿಲ್ (Electricity Bill) 10 ಲಕ್ಷ ರೂ. ಬಂದಿದ್ದು ಅಂಗಡಿ ಮಾಲೀಕ ಶಾಕ್ ಆಗಿರುವ ಘಟನೆ ಜಿಲ್ಲೆಯ ಕಡೂರು (Kadur) ಪಟ್ಟಣದಲ್ಲಿ ನಡೆದಿದೆ.
ಕಡೂರು ಪಟ್ಟಣದ ಉಳುಕಿನಕಲ್ಲು ಸಮೀಪದ ಡಾಗಾ ಕಾಂಪ್ಲೆಕ್ಸ್ನಲ್ಲಿನ ಮೋಹಿತ್ ಏಜೆನ್ಸಿಗೆ ಆಗಸ್ಟ್ ತಿಂಗಳ ವಿದ್ಯುತ್ ಬಿಲ್ 10,26,054 ರೂ. ಬಂದಿದೆ. ಪ್ರತಿ ತಿಂಗಳು ವಿದ್ಯುತ್ ಬಿಲ್ ಅಂದಾಜು 4,000 ದಿಂದ 4,500 ರೂ. ಮಾತ್ರ ಬರುತ್ತಿತ್ತು. ಆದರೆ ಆಗಸ್ಟ್ ತಿಂಗಳ ಬಿಲ್ ಏಕಾಏಕಿ 10 ಲಕ್ಷ ರೂ. ಬಂದಿದೆ. ಬಿಲ್ ಅವಧಿ 1/8/2023 ರಿಂದ 1/9/2023 ರವರೆಗೆ ಎಂದು ನಮೂದಿಸಲಾಗಿದೆ.
ಈ ಹಿಂದೆ ವಿದ್ಯುತ್ ಬಿಲ್ ಅನ್ನು ಸಮಯಕ್ಕೆ ಸರಿಯಾಗಿ ಪಾವತಿಸುತ್ತಾ ಬಂದಿದ್ದೇವೆ. ಯಾವ ತಿಂಗಳು ಕೂಡಾ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿಲ್ಲ. ಆದರೆ ಈ ತಿಂಗಳು 10 ಲಕ್ಷ ರೂ. ಬಿಲ್ ನೋಡಿ ಕಡೂರು ಮೆಸ್ಕಾಂ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ. ಅವರು ಸರಿ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆದರೆ ಮೆಸ್ಕಾಂ ಸಿಬ್ಬಂದಿಗೆ ಹೇಳಿ 4 ದಿನವಾದರೂ ಈವರೆಗೂ ಯಾವುದೇ ಮಾಹಿತಿ ನೀಡಿಲ್ಲ ಎಂದು ಅಂಗಡಿ ಮಾಲೀಕ ಕಮಲ್ ಚಂದ್ ಡಾಗಾ ಹಾಗೂ ಮೊಹಿತ್ ಡಾಗಾ ಮೆಸ್ಕಾಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದ್ಲೇ ಬಂದ್ ಬಿಸಿ- ಸೋಮವಾರ ಆಟೋ, ಟ್ಯಾಕ್ಸಿ ಸಿಗೋದು ಅನುಮಾನ
500 ರೂ. ಬರುವ ಜಾಗದಲ್ಲಿ 15 ಸಾವಿರ ರೂ. ಬಂದಿದೆ. ಇದು ಸಾಫ್ಟ್‌ವೇರ್ ಪ್ರಾಬ್ಲಂ. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮೆಸ್ಕಾಂ ಸಿಬ್ಬಂದಿ ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆಯಲ್ಲಿ ಕುರಿಬಲಿ ಕೊಟ್ಟಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕರಿಬ್ಬರ ಮೇಲೆ ಹಲ್ಲೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]