ನವದೆಹಲಿ: 10 ಹಾಗೂ 20 ರೂ. ಮುಖಬೆಲೆಯ ನೂರು ಕೋಟಿ ಪಾಲಿಮರ್ ನೋಟುಗಳನ್ನು ಪ್ರಾಯೋಗಿಕವಾಗಿ ಬಳಕೆಗೆ ತರಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಪಾಲಿಮರ್ ನೋಟುಗಳು ಪ್ರಾಯೋಗಿಕವಾಗಿ ಯಶಸ್ಸು ಕಂಡ ನಂತರ ಪೂರ್ಣ ಪ್ರಮಾಣದಲ್ಲಿ ಚಲಾವಣೆಗೆ ತರುವ ಸಂಬಂಧ ಆರ್‌ಬಿಐ ತನ್ನ ಕೇಂದ್ರ ಮಂಡಳಿಯ ಶಿಫಾರಸಿನೊಂದಿಗೆ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಿತ್ತು.
ಈ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ರಾಜ್ಯಸಭೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

