ನವದೆಹಲಿ: ಮಾಜಿ ಸಚಿವ ಪ್ರಭು ಚವ್ಹಾಣ್ (Prabhu Chauhan) ವಿರುದ್ಧ ನೂರು ಕೋಟಿ ಮಾನಹಾನಿ (Defamation) ಪ್ರಕರಣ ದಾಖಲಿಸಲು ಚಿಂತಿಸಿದ್ದು, ಈ ಬಗ್ಗೆ ಹೈಕಮಾಂಡ್ ನಾಯಕರ ಅನುಮತಿ ಕೇಳಿದ್ದೇನೆ. ವರಿಷ್ಠರು ಅನುಮತಿ ನೀಡಿದರೆ ಕಾನೂನು ಹೋರಾಟ ಮಾಡಲಿದ್ದೇನೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ (Bhagwanth Khuba) ಹೇಳಿದ್ದಾರೆ.
ನನ್ನ ಹತ್ಯೆಗೆ ಸಂಚು ನಡೆದಿದೆ ಎಂದು ಆರೋಪಿಸಿರುವ ಮಾಜಿ ಸಚಿವ ಪ್ರಭು ಚವ್ಹಾಣ್ ಆರೋಪಕ್ಕೆ ನವದೆಹಲಿಯಲ್ಲಿ (New Delhi) ಪ್ರತಿಕ್ರಿಯಿಸಿದ ಅವರು, ಈ ಗಂಭೀರ ಆರೋಪದಿಂದಾಗಿ ನಾನು ಆಘಾತಕ್ಕೆ ಒಳಗಾಗಿದ್ದೇನೆ. ಇದರಿಂದ ನನ್ನ ಕುಟುಂಬ ವಿಚಲಿತವಾಗಿದೆ. ಹೇಳಿಕೊಳ್ಳಲಾಗದಷ್ಟು ಮನಸ್ಸಿಗೆ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಪ್ರಾಪ್ತೆಯರ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ, ಗ್ಯಾಂಗ್ ರೇಪ್‌ಗೆ 20 ವರ್ಷ ಜೈಲು – ಲೋಕಸಭೆಯಲ್ಲಿ 3 ಮಸೂದೆ ಮಂಡಿಸಿದ ಅಮಿತ್ ಶಾ
Advertisement
Advertisement
ಮಂಡಲದ ಕಾರ್ಯಕಾರಣಿಯಲ್ಲಿ ಮಾತನಾಡುವ ಮಾತು ಬಿಟ್ಟು ನನ್ನ ಮೇಲೆ ಸಾರ್ವಜನಿಕವಾಗಿ ಆರೋಪ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರು, ಹಿತೈಷಿಗಳು ನಿರಂತರವಾಗಿ ಸಂಪರ್ಕ ಮಾಡಿ ಧೈರ್ಯ ತುಂಬುತ್ತಿದ್ದಾರೆ. ಪ್ರಭು ಚವ್ಹಾಣ್ ಆರೋಪ ಮೋಸ ಮತ್ತು ಕಪಟದಿಂದ ಕೂಡಿದೆ. ಕಳೆದ 9 ವರ್ಷದ ಹಿಂದೆ ಇದೇ ರೀತಿ ಆರೋಪ ಮಾಡಿದ್ದರು ಎಂದರು. ಇದನ್ನೂ ಓದಿ: ವಿಪಕ್ಷಗಳ ಮೈತ್ರಿಯಲ್ಲಿರುವ INDIA ಹೆಸರನ್ನು ನಿರ್ಬಂಧಿಸಿ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ
Advertisement
Advertisement
ನನ್ನ ಮತ್ತು ಅವರ ಸಮಸ್ಯೆ ಪಕ್ಷದ ವೇದಿಕೆಯಲ್ಲಿ ಬಗೆಹರಿಯುತ್ತವೆ. ತಪ್ಪು ತಿಳುವಳಿಕೆ ಸರಿಯಾಗಬಹುದು ಎಂದು ಭಾವಿಸಿದ್ದೆ. ಆದರೆ ಇದರ ಹಿಂದೆ ತಂತ್ರ, ಕುತಂತ್ರ, ಮೋಸ, ಕಪಟತನವಿದೆ ಎಂದು ಈಗ ಅರ್ಥವಾಗಿದೆ. ನನ್ನ ಚರಿತ್ರೆ, ಪಕ್ಷದ ಸೇವೆ ನೋಡಿ ಮೋದಿ ಅವರು ಮಂತ್ರಿ ಮಂಡಲದಲ್ಲಿ ಅವಕಾಶ ನೀಡಿದ್ದಾರೆ. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: 50ರ ಅಜ್ಜಿಗೆ ಫ್ಲೈಯಿಂಗ್ ಕಿಸ್ ಕೊಡಲು ರಾಹುಲ್‌ಗೇನು ಹುಡುಗಿಯರ ಕೊರತೆ ಇಲ್ಲ: ಕಾಂಗ್ರೆಸ್ ಶಾಸಕಿ ಹೇಳಿಕೆ
ಬೀದರ್ (Bidar) ಜಿಲ್ಲೆಯಲ್ಲಿ ಒಬ್ಬ ಶಾಸಕನಿಂದ ನಾಲ್ಕಕ್ಕೆ ಶಾಸಕರ ಸಂಖ್ಯೆ ಹೆಚ್ಚಿಸಿದೆ. ಇಂತಹ ಸಮಯದಲ್ಲಿ ಪ್ರಭು ಚವ್ಹಾಣ್ ಎಲ್ಲರ ಜೊತೆಗೆ ಸಂಭ್ರಮಿಸಬೇಕಿತ್ತು. ಆದರೆ ಅತ್ತು ಕರೆದು ದೂಷಣೆ ಮಾಡುತ್ತಿದ್ದಾರೆ. ಇದು ಅವರ ತಂತ್ರ ಕುತಂತ್ರದ ಆಟ. ಈ ಬಗ್ಗೆ ನಮ್ಮ ನಾಯಕರು ಮಾಹಿತಿ ಪಡೆದುಕೊಂಡಿದ್ದಾರೆ. ನಾನು ನನ್ನ ಭಾವನೆ ಹೇಳಿಕೊಂಡಿದ್ದೇನೆ. ಪಕ್ಷದ ವೇದಿಕೆಯಲ್ಲಿ ಸತ್ಯಾಸತ್ಯತೆಯನ್ನು ವರಿಷ್ಠರು ಹೊರ ಹಾಕಲಿದ್ದಾರೆ ಎಂದರು. ಇದನ್ನೂ ಓದಿ: ಅಪಾರ್ಟ್‍ಮೆಂಟ್ ಹೊರಗೆ ನಡೆದುಕೊಂಡು ಹೋಗ್ತಿದ್ದ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ
ನೂರು ಕೋಟಿ ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ್ದೇನೆ. ವರಿಷ್ಠರು ಅನುಮತಿ ನೀಡಿದರೆ ದೂರು ದಾಖಲಿಸುತ್ತೇನೆ. ಯಾವ್ಯಾವ ಆರೋಪ ಮಾಡಿದ್ದಾರೆ ಎಲ್ಲದಕ್ಕೂ ಮಾಧ್ಯಮದ ಮುಂದೆ ಮಾತನಾಡುವುದಿಲ್ಲ. ನಾನು ಪಕ್ಷಕ್ಕೆ ಮುಜುಗರ ಮಾಡುವುದಿಲ್ಲ. ಪಕ್ಷದಲ್ಲಿ ಅಥವಾ ಕೋರ್ಟ್‌ನಲ್ಲಿ ಅವರಿಗೆ ಉತ್ತರ ಸಿಗಲಿದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಎರಡನೇ ಬಾರಿ ವಿಶ್ವಾಸ ಪರೀಕ್ಷೆಯಲ್ಲಿ ಗೆದ್ದ ಮೋದಿ – ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು
ಪ್ರಚಾರಕ್ಕೆ ಬಂದಿಲ್ಲ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿ, ಚುನಾವಣೆ ಪೂರ್ವ ಕಾರ್ಯಕರ್ತರ ಅಸಮಾಧಾನ ಅವರ ಗಮನಕ್ಕೆ ತಂದಿದ್ದೆ. ಸಿಟಿ ರವಿ ಸಮ್ಮುಖದಲ್ಲಿ ಪ್ರಸ್ತಾಪ ಮಾಡಿದ್ದೆ. ಅವರ ಕ್ಷೇತ್ರದಲ್ಲಿ ಪ್ರವಾಸ ಮಾಡುವುದಾಗಿ ಹೇಳಿದ್ದೆ. ನಾನು ಮಂತ್ರಿಯಾಗಿದ್ದೇನೆ, ನಾನು ಗೆಲ್ಲುತ್ತೇನೆ. ನನ್ನ ಕ್ಷೇತ್ರಕ್ಕೆ ಬರುವ ಅಗತ್ಯ ಇಲ್ಲ ಎಂದು ಹೇಳಿದ್ದರು ಎಂದು ಹೇಳಿದರು. ಇದನ್ನೂ ಓದಿ: ಚಂದ್ರನ ಮೇಲ್ಮೈ ಹೇಗಿದೆ ನೋಡಿ – Chandrayaan-3 ಲ್ಯಾಂಡರ್ ಸೆರೆಹಿಡಿದ ಫೋಟೋ ಹಂಚಿಕೊಂಡ ಇಸ್ರೋ
9 ವರ್ಷಗಳಿಂದ ಸಾರ್ವಜನಿಕವಾಗಿ ಆರೋಪಗಳನ್ನು ಎದುರಿಸಿದ್ದೇನೆ. ಪಕ್ಷ ಕಟ್ಟುವುದು ನನ್ನ ಕೆಲಸ. ಬಿಜೆಪಿ (BJP) ಮೇಲೆ ನಂಬಿಕೆ ಇದೆ. ಸಂಬಂಧ ಕಡಿದು ಹೋಯಿತು ಎಂದು ಭಾವಿಸುವುದಿಲ್ಲ. ಅವರು ಅಹಂಕಾರದ ಸ್ವಭಾವ ಮುಂದುವರಿಸಿದರೆ ಮಾನಹಾನಿ ಕೇಸ್ ಹಾಕುತ್ತೇನೆ. ಚುನಾವಣೆ ಹತ್ತಿರ ಬಂದಾಗ ಮನಸ್ಸು ಬದಲಾಗಬಹುದು. ಚುನಾವಣೆಯಲ್ಲಿ ನನ್ನ ವಿಜಯಕ್ಕೆ ಅವರು ದುಡಿಯುತ್ತಾರೆ ಎನ್ನುವ ವಿಶ್ವಾಸ ಇದೆ ಎಂದರು. ಇದನ್ನೂ ಓದಿ: ಮಣಿಪುರ ಶೀಘ್ರದಲ್ಲೇ ಶಾಂತಿಯ ಬೆಳಕನ್ನು ಕಾಣಲಿದೆ: ಮೋದಿ ಭರವಸೆ
Web Stories