– ಕಳ್ಳತನದ ಸಿಸಿಟಿವಿ ದೃಶ್ಯ ರಿಲೀಸ್
ಹೈದರಾಬಾದ್: ತಿರುಪತಿಯ (Tirupati) ವೆಂಕಟೇಶ್ವರನ ಸನ್ನಿಧಿಯಲ್ಲಿ ಬರೋಬ್ಬರಿ 100 ಕೋಟಿ ರೂ. ಕಳ್ಳತನ ಮಾಡಿರುವುದಾಗಿ ಬಿಜೆಪಿ ಮುಖಂಡ ಟಿಟಿಡಿ ಟ್ರಸ್ಟ್ ಸದಸ್ಯ ಭಾನುಪ್ರಕಾಶ್ ರೆಡ್ಡಿ ಆರೋಪಿಸಿದ್ದಾರೆ.
ಜಗನ್‌ಮೋಹನ್ ರೆಡ್ಡಿ ಆಡಳಿತದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಿಮ್ಮಪ್ಪನ ಕಾಣಿಕೆ ಹುಂಡಿಯಿಂದ 100 ಕೋಟಿ ರೂ.ಗೂ ಅಧಿಕ ಹಣ ಕಳ್ಳತನ ಮಾಡಲಾಗಿದೆ ಆರೋಪಿಸಿದ್ದಾರೆ. ಈ ಹಣವನ್ನು ದೇವಸ್ಥಾನದ ಸಿಬ್ಬಂದಿ ರವಿಕುಮಾರ್ ಕಾಣಿಕೆ ಪೆಟ್ಟಿಗೆಯಿಂದ ಕದ್ದಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೇ ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.ಇದನ್ನೂ ಓದಿ: ಜೈನ ಮಂದಿರಗಳ ಅರ್ಚಕರಿಗೆ ವೇತನ – ಅಧಿಕೃತ ಆದೇಶ
ಲೂಟಿ ಮಾಡಿದ ಹಣವನ್ನು ಕೋಟ್ಯಂತರ ರೂ. ಮೌಲ್ಯದ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿದ್ದಾರೆ. ಅಲ್ಲದೇ ಈ ಹಣವನ್ನು ಜಗನ್ ರೆಡ್ಡಿ ಅವರ ತಡೆಪಲ್ಲಿ ಅರಮನೆಗೆ ವರ್ಗಾಯಿಸಲಾಗಿದೆ. ಬಳಿಕ ಲೋಕ್ ಅದಾಲತ್‌ನಲ್ಲಿಯೂ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿ, ಎಲ್ಲಾ ಸಾಕ್ಷ್ಯಗಳನ್ನು ನಾಶಪಡಿಸಲಾಗಿದೆ. ಟಿಟಿಡಿಯ ಇತಿಹಾಸದಲ್ಲಿ ನಡೆದ ಅತ್ಯಂತ ದೊಡ್ಡ ಲೂಟಿ ಎಂದು ಹೇಳಿದ್ದಾರೆ.
ಈ ಹಿನ್ನೆಲೆ ಆಂಧ್ರ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲಕ್ಕೆ ಉಂಟಾಗಿದ್ದು, ಅಲ್ಲದೇ ತಿರುಪತಿ ಭಕ್ತರಲ್ಲೂ ಭಾರೀ ಚರ್ಚೆಗೆ ಕಾರಣವಾಗಿದೆ.ಇದನ್ನೂ ಓದಿ: ರಾಯಚೂರು | ನಟಿ ಸಪ್ತಮಿಗೌಡ ನೋಡಲು ಅಭಿಮಾನಿಗಳ ನೂಕುನುಗ್ಗಲು