ಕೋಲ್ಕತ್ತಾ: ಮೊಬೈಲ್ ಗೇಮಿಂಗ್ ಆ್ಯಪ್ ಮೂಲಕ ವಂಚನೆ ನಡೆಸಿರುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯ(ED) ಕೋಲ್ಕತ್ತಾ(kolkata)ದ ಉದ್ಯಮಿಯೊಬ್ಬರಿಗೆ ಸಂಬಂಧಪಟ್ಟ 6 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿತು. ಈ ವೇಳೆ 12 ಕೋಟಿ ರೂ.ಗೂ ಅಧಿಕ ಹಣವನ್ನು ವಶಪಡಿಸಿಕೊಂಡಿದೆ.
ಇಡಿ ಅಧಿಕಾರಿಗಳ ತಂಡ ಬ್ಯಾಂಕ್ ಅಧಿಕಾರಿಗಳೊಂದಿಗೆ ಶನಿವಾರ ಕೋಲ್ಕತ್ತಾದ ಗಾರ್ಡನ್ ರೀಚ್ ಪ್ರದೇಶದಲ್ಲಿರುವ ಉದ್ಯಮಿ ಅಮೀರ್ ಖಾನ್ ಅವರ ನಿವಾಸದ ಮೇಲೆ ದಾಳಿ ನಡೆಸಿದೆ. ಈವರೆಗೆ ಉದ್ಯಮಿಯ ಮನೆಯಿಂದ 12 ಕೋಟಿ ರೂ.ಗೂ ಅಧಿಕ ಹಣವನ್ನು ವಶಪಡಿಸಿಕೊಂಡಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: 6 ತಿಂಗಳು ರಜೆ ಹಾಕಿ- ಡೀನ್ ವಿರುದ್ಧ ಸಚಿವ ಸೋಮಣ್ಣ ಗರಂ
Advertisement
Advertisement
ಭಾರೀ ಮೊತ್ತದ ಹಣವನ್ನು ಎಣಿಕೆ ಮಾಡಲು ಯಂತ್ರಗಳನ್ನು ತರಿಸಲಾಗಿದೆ. ಹಣವನ್ನು ಸಾಗಿಸಲು ಉದ್ಯಮಿಯ ಮನೆಗೆ ಟ್ರಕ್‌ಗಳನ್ನು ತರಲಾಗಿದೆ. ಇಡಿ ದಾಳಿಯ ಹಿನ್ನೆಲೆ ಕೇಂದ್ರದ ಪಡೆಗಳಿಂದ ಆ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ಮಳೆ ಅವಾಂತರ: ಭಾರತ-ನ್ಯೂಜಿಲೆಂಡ್ ಟೆಸ್ಟ್ ಇನ್ನಿಂಗ್ಸ್ ರದ್ದು, ನಾಳೆ ಡ್ರಾ ಸಾಧ್ಯತೆ
Advertisement
ವರದಿಗಳ ಪ್ರಕಾರ ಇ-ನಗ್ಗೆಟ್ಸ್(E-Nuggets) ಎಂಬ ಮೊಬೈಲ್ ಗೇಮಿಂಗ್ ಆ್ಯಪ್‌ನ ಬಳಕೆದಾರರಿಗೆ ವಂಚಿಸಿರುವ ಆರೋಪದ ಮೇಲೆ ಆರೋಪಿ ಅಮೀರ್ ಖಾನ್ ಮತ್ತು ಇತರರ ವಿರುದ್ಧ ಫೆಡರಲ್ ಬ್ಯಾಂಕ್ ಅಧಿಕಾರಿಗಳು ದೂರು ನೀಡಿದ್ದರು. ಈ ದೂರಿನ ಮೇರೆಗೆ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಉದ್ಯಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.