ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಅಕ್ಟೋಬರ್ 17ರಂದು ನಡೆಯಲಿರುವ ಪವಿತ್ರ ಕಾವೇರಿ ತೀರ್ಥೋದ್ಭವ (Cauvery Theerthodbhava) ಆಚರಣೆಗೆ 2 ಕೋಟಿ ರೂ. ಅನುದಾನ (Grant) ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕಾವೇರಿ ನೀರಾವರಿ ನಿಗಮದ ಮೂಲಕ ಈ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾಡಿದ್ದ ಮನವಿಗೆ ಸ್ಪಂದಿಸಿರುವ ಡಿ.ಕೆ. ಶಿವಕುಮಾರ್ ಅನುದಾನ ಬಿಡುಗಡೆಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ಅಸಮಾಧಾನ; ಸಿಎಂಗೆ ಪತ್ರ

ಕಾವೇರಿ ತೀರ್ಥೋದ್ಭವವು ಕೊಡಗಿನ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಗಳಲ್ಲಿ ಒಂದಾಗಿದ್ದು, ಪ್ರತಿ ವರ್ಷ ಸಾವಿರಾರು ಭಕ್ತರು ಭಾಗವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಆಚರಣೆಯ ಸಿದ್ಧತೆಗಳು ಹಾಗೂ ಅಗತ್ಯ ಮೂಲಸೌಕರ್ಯಗಳಿಗಾಗಿ ಸರ್ಕಾರದಿಂದ 2 ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಇದನ್ನೂ ಓದಿ: ಯಾದಗಿರಿ | ಭೀಮಾ ನದಿಯಲ್ಲಿ ಸ್ನಾನ ಮಾಡಲು ಹೋದ ಯುವಕ ನಾಪತ್ತೆ
ಗೋಣಿಕೊಪ್ಪ ದಸರಾಗೂ ಹೆಚ್ಚುವರಿ ಅನುದಾನ:
ಇದೇ ವೇಳೆ ಗೋಣಿಕೊಪ್ಪ ದಸರಾ ಉತ್ಸವಕ್ಕೂ ಸರ್ಕಾರ ಹೆಚ್ಚುವರಿ ಅನುದಾನ ಘೋಷಿಸಿದೆ. ಕಳೆದ ಬಾರಿ ಗೋಣಿಕೊಪ್ಪ ದಸರಾ ಉತ್ಸವಕ್ಕೆ 75 ಲಕ್ಷ ರೂ. ಅನುದಾನ ನೀಡಲಾಗಿತ್ತು. ಈ ಬಾರಿ ಹೆಚ್ಚುವರಿಯಾಗಿ 25 ಲಕ್ಷ ರೂ. ಅನುದಾನ ನೀಡಲು ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ಮಾಜಿ ಶಾಸಕ ಪ್ರೀತಂಗೌಡಗೆ ಬಿಗ್ ರಿಲೀಫ್; ಲೋಕಾಯುಕ್ತ ತನಿಖೆ ಆದೇಶಕ್ಕೆ ಹೈಕೋರ್ಟ್ ತಡೆ
ಹೀಗಾಗಿ ಕಾವೇರಿ ತೀರ್ಥೋದ್ಭವ ಹಾಗೂ ಗೋಣಿಕೊಪ್ಪ ದಸರಾ ಉತ್ಸವ ಎರಡಕ್ಕೂ ಸರ್ಕಾರದ ವತಿಯಿಂದ ಆರ್ಥಿಕ ನೆರವು ದೊರೆಯಲಿದೆ. ಇದನ್ನೂ ಓದಿ: ಇನ್‌ಸ್ಟಾ ಪ್ರೇಯಸಿಗೆ ಎಂಗೇಜ್‌ಮೆಂಟ್; ಆರನೇ ಮಹಡಿಯಿಂದ ಜಿಗಿಯಲು ಮುಂದಾದ ಅಪ್ರಾಪ್ತ
