ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆಯೊಬ್ಬರ ಮನೆಯಿಂದ 20 ಕೋಟಿ ರೂ. ಹಣವನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ವಶಪಡಿಸಿಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ಇಡಿ ದಾಳಿ ನಡೆಸಿದೆ.
ಅರ್ಪಿತಾ ಮುಖರ್ಜಿ ಮನೆಯಿಂದ ವಶಪಡಿಸಿಕೊಳ್ಳಲಾದ 20 ಕೋಟಿ ಹಣ ಶಿಕ್ಷಕರ ನೇಮಕಾತಿ ಹಗರಣದಿಂದ ಬಂದಿರುವ ಆದಾಯ ಎಂದು ಶಂಕಿಸಲಾಗಿದೆ. ಭಾರೀ ಮೊತ್ತದ ಹಣವನ್ನು ಎಣಿಕೆ ಯಂತ್ರಗಳಿಂದ ಹಾಗೂ ಬ್ಯಾಂಕ್ ಅಧಿಕಾರಿಗಳ ನೆರವಿನಿಂದ ಎಣಿಸಲಾಗಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: 75 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿರುವ ಮನೆಗೆ ಹೋಗಿ 90ರ ಅಜ್ಜಿ ಭಾವುಕ
Advertisement
Advertisement
ಇಡಿ ರೇಡ್ ವೇಳೆ ಅರ್ಪಿತಾ ಮನೆ ಆವರಣದಿಂದ 20ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಇಷ್ಟೊಂದು ಸಂಖ್ಯೆಯ ಮೊಬೈಲ್ ಫೋನ್‌ಗಳನ್ನು ಹೊಂದಿರುವ ಬಗೆಗಿನ ಉದ್ದೇಶವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ.
Advertisement
ಚಟರ್ಜಿ ಅವರೊಂದಿಗೆ, ರಾಜ್ಯ ಶಿಕ್ಷಣ ಸಚಿವ ಪರೇಶ್ ಸಿ ಅಧಿಕಾರಿ, ಶಾಸಕ ಮಾಣಿಕ್ ಭಟ್ಟಾಚಾರ್ಯ ಹಾಗೂ ಇನ್ನಿತರರ ಮೇಲೂ ಇಡಿ ದಾಳಿ ನಡೆಸಿದೆ. ಇದನ್ನೂ ಓದಿ: 2-3 ತಲೆಮಾರಿಗಾಗುವಷ್ಟು ಮಾಡಿಕೊಂಡಿದ್ದೇವೆ – ವಿವಾದಿತ ಹೇಳಿಕೆಗೆ ರಮೇಶ್ ಕುಮಾರ್ ಸ್ಪಷ್ಟನೆ
Advertisement
ಪ್ರಸ್ತುತ ಕೈಗಾರಿಕಾ ಮತ್ತು ವಾಣಿಜ್ಯ ಸಚಿವರಾಗಿರುವ ಪಾರ್ಥ ಚಟರ್ಜಿ ಅವರು ಈ ಹಿಂದೆ ಶಿಕ್ಷಣ ಸಚಿವರಾಗಿದ್ದಾಗ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ (ಡಬ್ಲ್ಯುಬಿಎಸ್‌ಎಸ್‌ಸಿ) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಿರುವುದಾಗಿ ಆರೋಪಿಸಲಾಗಿದೆ.