ರಾಂಚಿ: ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು (BJP Manifesto) ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಭಾನುವಾರ ಬಿಡುಗಡೆಗೊಳಿಸಿದರು.
ಬಿಜೆಪಿ ಜಾರ್ಖಂಡ್‌ನಲ್ಲಿ (Jharkhand) ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 2,100 ರೂ. ನೀಡುವುದು ಸೇರಿದಂತೆ ಹಲವು ಗ್ಯಾರಂಟಿಗಳನ್ನು ಘೋಷಣೆ ಮಾಡಿದರು. ಇದನ್ನೂ ಓದಿ: 10 ದಿನಗಳಲ್ಲಿ ರಾಜೀನಾಮೆ ಕೊಡದಿದ್ರೆ ಸಿದ್ದಿಕಿಯಂತೆ ಹತ್ಯೆ – ಸಿಎಂ ಯೋಗಿಗೆ ಬೆದರಿಕೆ ಹಾಕಿದ್ದ ಮಹಿಳೆ ಅರೆಸ್ಟ್
Advertisement
Advertisement
ಬಿಜೆಪಿ ಪ್ರಣಾಳಿಕೆ ಏನು?
* ಪ್ರತಿ ಮನೆಗೆ 500 ರೂ.ಗೆ ಎಲ್‌ಪಿಜಿ ಸಿಲಿಂಡರ್ ಮತ್ತು ವಾರ್ಷಿಕ 2 ಉಚಿತ ಸಿಲಿಂಡರ್
Advertisement
* ನುಸುಳುಕೋರರು ಆಕ್ರಮಿಸಿಕೊಂಡಿರುವ ಆದಿವಾಸಿಗಳ ಭೂಮಿಯನ್ನು ಆದಿವಾಸಿಗಳಿಗೆ ಹಿಂದಿರುಗಿಸುವುದಾಗಿ ಪ್ರತಿಜ್ಞೆ
Advertisement
* ಬುಡಕಟ್ಟು ಜನಾಂಗದವರನ್ನು ಮದುವೆಯಾಗುವ ನುಸುಳುಕೋರರ ಮಕ್ಕಳಿಗೆ ಬುಡಕಟ್ಟು ಸ್ಥಾನಮಾನ ರದ್ದು
* ಆದಿವಾಸಿಗಳನ್ನು ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ವ್ಯಾಪ್ತಿಯಿಂದ ಹೊರಗಿಡಲಾಗುವುದು
* ಪ್ರಶ್ನೆ ಪತ್ರಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದಾಗಿ ಭರವಸೆ
* 5 ವರ್ಷಗಳಲ್ಲಿ ಯುವಕರಿಗೆ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ಅವಕಾಶಗಳನ್ನು ಖಾತರಿಪಡಿಸುತ್ತೇವೆ
* 2,87,500 ಸರ್ಕಾರಿ ಹುದ್ದೆಗಳ ನೇಮಕಾತಿ ಪಾರದರ್ಶಕವಾಗಿ ನಡೆಯಲಿದ್ದು, ಮೊದಲ ಕ್ಯಾಬಿನೆಟ್‌ನಲ್ಲೇ ಪ್ರಕ್ರಿಯೆ ಶುರುವಾಗಲಿದೆ.
* 2025ರ ನವೆಂಬರ್ ಒಳಗೆ 1.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
81 ಸದಸ್ಯ ಬಲದ ಕ್ಷೇತ್ರಗಳಿಗೆ ನ.13 ಮತ್ತು 20 ರಂದು ಚುನಾವಣೆ (Jharkhand Assembly Election) ನಡೆಯಲಿದೆ. ನ.23 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ನ.7ರ ಒಳಗಡೆ ಬಾಕಿ ಹಣವನ್ನು ಪಾವತಿಸದೇ ಇದ್ದರೆ ವಿದ್ಯುತ್ ಕೊಡಲ್ಲ: ಬಾಂಗ್ಲಾಗೆ ಅದಾನಿ ಡೆಡ್‌ಲೈನ್