ಬೆಂಗಳೂರು: ಕೆ.ಆರ್. ಪುರದಲ್ಲಿ(K R Pura) ಪ್ರಿಯಕರನೊಂದಿಗೆ ಸೇರಿ ತಂದೆ, ತಾಯಿ ಹಾಗೂ ತಂಗಿಯನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. (Bengaluru) ಆರೋಪಿ ಶ್ವೇತಾ ಸುಮಾರು 30 ಲಕ್ಷ ರೂ. (Loan)ಸಾಲ ಮಾಡಿಕೊಂಡಿದ್ದಳು. ಸಾಲ ತೀರಿಸಲು ಹಣ ಅಥವಾ ಆಸ್ತಿಯಲ್ಲಿ ಪಾಲು ನೀಡಲು ಕುಟುಂಬ ನಿರಾಕರಿಸಿದ್ದ ಹಿನ್ನೆಲೆ ಈ ಹತ್ಯೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಹಾಗೂ ಸುಪ್ರಿಯಾ (20) ಕೊಲೆಯಾದವರು. ಪ್ರಕರಣದ ಪ್ರಮುಖ ಆರೋಪಿಗಳಾದ ಶ್ವೇತಾ ಮತ್ತು ಆಕೆಯ ಪ್ರಿಯಕರ ಕೆನತ್ ತಲೆಮರೆಸಿಕೊಂಡಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಶ್ವೇತಾ ಮತ್ತು ಕೆನತ್ ಲಿವ್-ಇನ್ ಸಂಬಂಧದಲ್ಲಿದ್ದ ವೇಳೆ 30 ಲಕ್ಷ ರೂ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ಸಾಲ ತೀರಿಸಲು ಹಣ ನೀಡುವಂತೆ ಶ್ವೇತಾ ತನ್ನ ತಂದೆ-ತಾಯಿಯ ಬಳಿ ಕೇಳಿದ್ದಳು. ಆದರೆ ಹಣ ನೀಡಲು ಪೋಷಕರು ನಿರಾಕರಿಸಿದ್ದರು. ಇದಾದ ಬಳಿಕ ಕುಟುಂಬದ ಆಸ್ತಿಯಲ್ಲಿ ಪಾಲು ನೀಡುವಂತೆ ಶ್ವೇತಾ ಒತ್ತಾಯ ಮಾಡಿದ್ದಳು. ಇದೇ ವಿಚಾರವಾಗಿ ಕುಟುಂಬದಲ್ಲಿ ಹಲವು ಬಾರಿ ಗಲಾಟೆ ನಡೆದಿತ್ತು.ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು
ಘಟನೆ ನಡೆದ ದಿನವೂ ಇದೇ ವಿಷಯಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿದೆ. ಇದೇ ವೇಳೆ ಶ್ವೇತಾ ಮತ್ತು ಕೆನತ್ ಸೇರಿ ತಂದೆ, ತಾಯಿ ಹಾಗೂ ತಂಗಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಈ ಹಿಂದೆ ಹೊರಬಿದ್ದ ಮಾಹಿತಿಯಂತೆ, ಶ್ವೇತಾ ಕೆನತ್ ಜೊತೆ ಲಿವ್-ಇನ್ ಸಂಬಂಧದಲ್ಲಿದ್ದಳು. ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಮಗಳಿಗೆ ಬುದ್ಧಿ ಹೇಳಲು ಬಂದಿದ್ದ ವೇಳೆ ಘಟನೆ ನಡೆದಿತ್ತು. ಗಾಯಗೊಂಡಿದ್ದ ಸೋಮಸುಂದರ್ ಆಸ್ಪತ್ರೆ ಸೇರಿಸುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಸಾವಿಗೂ ಮುನ್ನ ಮಗಳು ಮತ್ತು ಆಕೆಯ ಪ್ರಿಯಕರ ದಾಳಿ ನಡೆಸಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಆರೋಪಿ ಶ್ವೇತಾ ಮತ್ತು ಕೆನತ್ ಪತ್ತೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ತೀವ್ರ ಶೋಧ ಕಾರ್ಯ ಮುಂದುವರಿದಿದೆ.ಇದನ್ನೂ ಓದಿ: ಆಶೀರ್ವಾದದ ನೆಪದಲ್ಲಿ ಚಿನ್ನದ ಉಂಗುರ ಕಳವು; ನಾಗಸಾಧುಗಳ ವೇಷದಲ್ಲಿ ಬಂದ ಇಬ್ಬರಿಂದ ಕೃತ್ಯ
