ಬೆಳಗಾವಿ: ಬರೋಬ್ಬರಿ 4,500 ಕೋಟಿ ರೂ. ವಂಚನೆ ಪ್ರಕರಣ ಆರೋಪಿ ಶಿವಾನಂದ ನೀಲಣ್ಣವರ್‌ಗೆ (Shivanand Neelannavar) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಮೂರು ಲಕ್ಷದ ವೈಯಕ್ತಿಕ ಬಾಂಡ್ ಹಾಗೂ ದೇಶ ಬಿಟ್ಟು ಹೋಗದಂತೆ ಷರತ್ತು ವಿಧಿಸಿ 93ನೇ ಸಿಟಿ ಸಿವಿಲ್ & ಸೆಷನ್ಸ್ ನ್ಯಾಯಾಲದಿಂದ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಇದನ್ನೂ ಓದಿ: 4,500 ಕೋಟಿ ವಂಚನೆ ಕೇಸ್| 10 ದಿನ ಸಿಐಡಿ ಕಸ್ಟಡಿಗೆ- ಕಣ್ಣೀರಿಟ್ಟ ಶಿವಾನಂದ ನೀಲಣ್ಣವರ್
ಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಜನರಿಗೆ ಕೋಟಿ ಕೋಟಿ ವಂಚನೆ ಮಾಡಿದ್ದ ಆರೋಪಿ ಶಿವಾನಂದ, ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದು ಸೋಮವಾರ ಬಿಡುಗಡೆಯಾಗುವ ಸಾಧ್ಯತೆ ಇದೆ.
ಶಿವಂ ಅಸೋಸಿಯೇಟ್ಸ್‌ನ ಮಾಲೀಕ ಶಿವಾನಂದ ನೀಲಣ್ಣವರ್ ವಿರುದ್ಧ ಬಹುಕೋಟಿ ವಂಚನೆ ಆರೋಪ ಕೇಳಿಬಂದಿತ್ತು. ಆರ್‌ಬಿಐ ಅಥವಾ ಸೆಬಿಯಿಂದ ಯಾವುದೇ ಅನುಮೋದನೆಗಳಿಲ್ಲದೇ ಹೆಚ್ಚಿನ ಬಡ್ಡಿದರದ ಭರವಸೆ ನೀಡಿ, ಹೂಡಿಕೆದಾರರಿಂದ ಸಾವಿರಾರು ಕೋಟಿ ಹಣ ಸಂಗ್ರಹಿಸಿದ್ದ. ಈ ಆರೋಪದಲ್ಲಿ ಶಿವನಾಂದನ ಬಂಧನವಾಗಿತ್ತು. ಇದನ್ನೂ ಓದಿ: ಬೆಳಗಾವಿಯಲ್ಲಿ 4,500 ಕೋಟಿ ವಂಚನೆ ಆರೋಪ ಕೇಸ್; ಶಿವಾನಂದ್ ನೀಲಣ್ಣವರ್ ಬಂಧನ
