ಬಳ್ಳಾರಿ: ಜಿಲ್ಲಾಸ್ಪತ್ರೆಯಲ್ಲಿ (District Hospital) ಸಿಸೇರಿಯನ್ (Cesarean) ಬಳಿಕ ಸಾವನ್ನಪ್ಪಿದ ಬಾಣಂತಿ ಸುಮಯಾ ಅವರ ಕುಟುಂಬಸ್ಥರಿಗೆ ಶಾಸಕ ಡಾ. ಶ್ರೀನಿವಾಸ್ (Dr Srinivas) ಅವರು ಸರ್ಕಾರದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ್ದಾರೆ.
ಸಿಸೇರಿಯನ್ ಬಳಿಕ ಐವರು ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಬಾಣಂತಿಯರ ಕುಟುಂಬಕ್ಕೆ ಸರ್ಕಾರ ತಲಾ ಐದು ಲಕ್ಷ ಪರಿಹಾರ ಘೋಷಣೆ ಮಾಡಿತ್ತು. ಇದೇ ವೇಳೆ ಜಿಲ್ಲಾಸ್ಪತ್ರೆಯಲ್ಲಿ ನ.10ರಂದು ಹೆರಿಗೆ ಮಾಡಿಸಿಕೊಂಡಿದ್ದ ಕೂಡ್ಲಿಗಿಯ ಸುಮಯಾ, ಹೆರಿಗೆ ಬಳಿಕ ಅಂಗಾಂಗ ವೈಫಲ್ಯದಿಂದ ಬಳಲಿ ಡಿ. 5 ರಂದು ಮೃತಪಟ್ಟಿದ್ದರು. ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ಗರ್ಭಿಣಿಯರ ಹಿಂದೇಟು – ದಾಖಲಾತಿ ಪ್ರಮಾಣ ಅರ್ಧಕರ್ಧ ಇಳಿಕೆ
ಭಾನುವಾರ ಮೃತ ಬಾಣಂತಿ ಸುಮಯಾ ಕುಟುಂಬಸ್ಥರಿಗೆ ಕುಡ್ಲಿಗಿ ಶಾಸಕ ಡಾ. ಎನ್ ಟಿ ಶ್ರೀನಿವಾಸ್ ಅವರು 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದರು.
ಚೆಕ್ ನೀಡಿ, ಮಗುವಿನ ಆರೋಗ್ಯ ವಿಚಾರಿಸಿದ ಶಾಸಕ ಡಾ. ಎನ್ ಟಿ ಶ್ರೀನಿವಾಸ್, ಮಗುವಿನ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವಂತೆ ಕುಟುಂಬಸ್ಥರಿಗೆ ಹೇಳಿದರು.