ಕಾರವಾರ: ಅಕ್ರಮವಾಗಿ ಗೋವಾದಿಂದ ತೆಲಂಗಾಣಕ್ಕೆ ಲಾರಿಯಲ್ಲಿ ಸಾಗಿಸುತ್ತಿದ್ದ 1.2 ಲಕ್ಷ ಮೌಲ್ಯದ ಮದ್ಯವನ್ನು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನ್ ಮೋಡ್ ಚಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆದಿದ್ದು, ಲಾರಿ ಚಾಲಕನ್ನು ಬಂಧಿಸಿದ್ದಾರೆ.
ತೆಲಂಗಾಣ ಮೂಲದ ರಾಮಸ್ವಾಮಿ ಬಂಧಿತ ಲಾರಿ ಚಾಲಕ. ಬೃಹತ್ ಮೊತ್ತದ ಮದ್ಯವನ್ನು ಎಲೆಕ್ಟ್ರಿಕ್ ಬೋರ್ಡ್ ಲಾರಿಯಲ್ಲಿ ಕರ್ನಾಟಕದ ಗಡಿ ಮಾರ್ಗವಾಗಿ ಗೋವಾದಿಂದ ತೆಲಂಗಾಣಕ್ಕೆ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಆಧಾರದ ಮೇಲೆ ಜಿಲ್ಲಾ ಅಬಕಾರಿ ಅಧಿಕಾರಿ ಮಂಜುನಾಥ್ ಅವರ ದಾಳಿ ನಡೆಸಿದ್ದರು, ಈ ವೇಳೆ ಲಾರಿ ಸಮೇತ ಚಾಲಕ ಸಿಕ್ಕಿಬಿದ್ದಿದ್ದಾನೆ.
Advertisement
ಉತ್ತರ ಕನ್ನಡ ಜಿಲ್ಲೆಯ ಅನ್‍ಮೋಡ್ ಮಾರ್ಗವಾಗಿ ಹೊರಟಿದ್ದ ಲಾರಿಯನ್ನು ನಿಲ್ಲಿಸಿ, ಅದರಲ್ಲಿದ್ದ 1.2 ಲಕ್ಷ ಮೌಲ್ಯದ ಮದ್ಯ ಸೇರಿದಂತೆ ಒಟ್ಟು 50 ಲಕ್ಷ ಮೌಲ್ಯದ ವಸ್ತುಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಲಾರಿ ಚಾಲಕನನ್ನು ಬಂಧಿಸಿದ್ದಾರೆ. ಈ ಕುರಿತು ಜೋಯಿಡಾ ಅಬಕಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.