ಶ್ರೀನಗರ: ಇಂದು ಭಾರತ ಮತ್ತು ಪಾಕ್ ಹೈವೋಲ್ಟೇಜ್ ಕ್ರಿಕೆಟ್ ಮ್ಯಾಚ್ ಹಿನ್ನೆಲೆ ಶ್ರೀನಗರದಲ್ಲಿರುವ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‍ಐಟಿ) ತನ್ನ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಭಾರತ-ಪಾಕಿಸ್ತಾನ ಏಷ್ಯಾ ಕಪ್ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸದಂತೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದೆ.
Advertisement
ವಿದ್ಯಾರ್ಥಿಗಳ ಸುರಕ್ಷತೆ ಹಿತದೃಷ್ಟಿಯಿಂದ ಈ ಕುರಿತಂತೆ ನೋಟಿಸ್ ನೀಡಿದ್ದು, ಮ್ಯಾಚ್ ವೇಳೆ ವಿದ್ಯಾರ್ಥಿಗಳು ನಿಗದಿ ಪಡಿಸಿರುವ ಕೊಠಡಿಗಳಲ್ಲಿಯೇ ಇರಬೇಕು ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ. ಇದನ್ನೂ ಓದಿ: ಈದ್ಗಾ ಮೈದಾನ ವಿಚಾರವಾಗಿ ಹಿಂದೂ ಸಂಘಟನೆಗಳ ಸವಾಲು – ಎಚ್ಚೆತ್ತ ಪಾಲಿಕೆ ದಶ ದಿಕ್ಕುಗಳಲ್ಲಿ ಹದ್ದಿನ ಕಣ್ಣು
Advertisement
Advertisement
ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ವಿವಿಧ ರಾಷ್ಟ್ರಗಳನ್ನೊಳಗೊಂಡ ಕ್ರಿಕೆಟ್ ಸರಣಿ ನಡೆಯುತ್ತಿದೆ ಎಂದು ವಿದ್ಯಾರ್ಥಿಗಳು ತಿಳಿದಿದೆ. ಹೀಗಾಗಿ ಆಟವನ್ನು ಆಟದ ರೀತಿ ನೋಡುವಂತೆ ತಿಳಿಸಿದ್ದು, ಹಾಸ್ಟೆಲ್‍ನಲ್ಲಿ ಯಾವುದೇ ರೀತಿಯ ಅಶಿಸ್ತು ಸೃಷ್ಟಿಸದಂತೆ ಸೂಚಿಸಿದೆ.
Advertisement
ಭಾನುವಾರದ ಪಂದ್ಯ ನಡೆಯುವ ವೇಳೆ ವಿದ್ಯಾರ್ಥಿಗಳು ತಮಗೆ ನಿಗದಿಪಡಿಸಿದ ಕೊಠಡಿಗಳಲ್ಲಿಯೇ ಇರಬೇಕು ಮತ್ತು ಇತರ ವಿದ್ಯಾರ್ಥಿಗಳ ಕೊಠಡಿಗಳಿಗೆ ಪ್ರವೇಶಿಸಬಾರದು. ಗುಂಪು ಕಟ್ಟಿಕೊಂಡು ಪಂದ್ಯವನ್ನು ವೀಕ್ಷಿಸಬಾರದು. ಇಂದು ವೇಳೆ ನಿಗದಿ ಪಡಿಸಿರುವ ಕೊಠಡಿಯಲ್ಲಿ ಮ್ಯಾಚ್ ವೀಕ್ಷಿಸಿದರೆ, ಆ ಕೊಠಡಿಯಲ್ಲಿರುವ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಹಾಸ್ಟೆಲ್ ವಸತಿಯಿಂದ ಡಿಬಾರ್ ಮಾಡಲಾಗುತ್ತದೆ ಮತ್ತು ಎಲ್ಲಾ ವಿದ್ಯಾರ್ಥಿಗಳಿಗೆ ಕನಿಷ್ಠ 5,000 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದೆ.
ಪಂದ್ಯಕ್ಕೆ ಸಂಬಂಧಿಸಿದ ಯಾವುದೇ ವಿಚಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಬಾರದು. ಇದಲ್ಲದೆ ಪಂದ್ಯದ ಸಮಯದಲ್ಲಿ ಅಥವಾ ನಂತರ ಹಾಸ್ಟೆಲ್ ಕೊಠಡಿಗಳಿಂದ ಹೊರಬರದಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಇಂಡಿಯಾ, ಪಾಕ್ ಹೈವೋಲ್ಟೇಜ್ ಕ್ರಿಕೆಟ್- ಭಾರತ ಗೆಲುವಿಗೆ ಮುಸ್ಲಿಮರಿಂದ ವಿಶೇಷ ಪೂಜೆ
2016ರಲ್ಲಿ ಟಿ-20 ವಿಶ್ವಕಪ್ ಸೆಮಿ-ಫೈನಲ್‍ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಸೋತ ನಂತರ ಹೊರರಾಜ್ಯ ಮತ್ತು ಸ್ಥಳೀಯ ವಿದ್ಯಾರ್ಥಿಗಳ ನಡುವೆ ನ್ಯಾಷನಲ್ ಇನ್‍ಸ್ಟಿಟ್ಯೂಟ್‍ನಲ್ಲಿ ಘರ್ಷಣೆಗಳು ಸಂಭವಿಸಿತ್ತು. ಇದರಿಂದ ಕೆಲ ದಿನಗಳವರೆಗೆ ಎನ್‍ಐಟಿ ಕಾಲೇಜನ್ನು ಮುಚ್ಚಲಾಗಿತ್ತು.