ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.
Advertisement
ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ.
Advertisement
Demolition of 'Praja Vedike' building underway in Amaravati. The building was constructed by the previous government led by N Chandrababu Naidu
#AndhraPradesh pic.twitter.com/DeNs1xqR9f
— ANI (@ANI) June 25, 2019
Advertisement
2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಈ ಕಟ್ಟಡವನ್ನು ನಿರ್ಮಾಣ ಮಾಡಿತ್ತು. 5 ಕೋಟಿ ವೆಚ್ಚದಲ್ಲಿ ಆರಂಭವಾಗಿದ್ದ ಈ ಕಟ್ಟಡ, ಕಾಮಗಾರಿ ಪೂರ್ಣಗೊಂಡಾಗ 8 ಕೋಟಿ ವೆಚ್ಚ ವ್ಯಯಿಸಲಾಗಿತ್ತು. ಚಂದ್ರ ಬಾಬು ಅವರು ಈ ಕಟ್ಟಡವನ್ನು ಅವರು ಪಕ್ಷದ ಕಾರ್ಯಕರ್ತರು ಮತ್ತು ಜನರನ್ನು ಭೇಟಿಯಾಗಲು ಉಪಯೋಗಿಸುತ್ತಿದ್ದರು. ಆದರೆ ಈ ಕಟ್ಟಡ ಅಕ್ರಮವಾಗಿದ್ದರಿಂದ ಜಗನ್ ಧ್ವಂಸಗೊಳಿಸಲು ಆದೇಶ ನೀಡಿದ್ದರು.
Advertisement
2017ರಲ್ಲಿ ನಾಯ್ಡು ಮನೆ ಸಮೀಪದಲ್ಲೇ 8 ಕೋಟಿ ರೂ. ವೆಚ್ಚದಲ್ಲಿ ಈ ವೇದಿಕೆ ನಿರ್ಮಿಸಿದ್ದರು. ಮುಖ್ಯಮಂತ್ರಿ ಆದ ನಂತರ ಜಗನ್ ಮೊದಲ ಬಾರಿಗೆ ಪ್ರಜಾ ವೇದಿಕೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಸಭೆಯನ್ನೂ ನಡೆಸಿದ್ದರು. ಈ ವೇಳೆ, ಇದೇ ಕೊನೇ ಸಭೆ. ಪಾರದರ್ಶಕತೆ ನಿಟ್ಟಿನಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿರುವ ಈ ಕಟ್ಟಡವನ್ನು ಧ್ವಂಸಗೊಳಿಸಬೇಕು ಎಂದು ಹೇಳಿದ್ದರು.
#WATCH: Demolition of 'Praja Vedike' building underway in Amaravati. The building was constructed by the previous government led by N. Chandrababu Naidu. #AndhraPradesh pic.twitter.com/qRCWjfVTJZ
— ANI (@ANI) June 25, 2019
ಕೆಲ ವಾರಗಳ ಹಿಂದೆಯಷ್ಟೇ ಚಂದ್ರಬಾಬು ನಾಯ್ಡು ಅವರಿಗೆ ಸರ್ಕಾರ ನೀಡಿದ್ದ ಝಡ್ ಪ್ಲಸ್ ಭದ್ರತೆಯನ್ನು ಸರ್ಕಾರ ವಾಪಸ್ ಪಡೆಯಲಾಗಿತ್ತು. ಇತ್ತ ಜೂನ್ 4 ರಂದು ಪ್ರಜಾ ವೇದಿಕಾ ಬಳಿ ಇರುವ ಮನೆಯಲ್ಲೇ ಇರಲು ಅವಕಾಶ ಕೊಡುವಂತೆ ನಾಯ್ಡು ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು. ಅಲ್ಲದೇ `ಪ್ರಜಾ ವೇದಿಕಾ’ ಹಾಲ್ ಅನ್ನು ಪಕ್ಷದ ಕಾರ್ಯಗಳನ್ನು ನಡೆಸಲು ಬಳಕೆ ಮಾಡಲು ನೀಡಬೇಕೆಂದು ಪತ್ರದಲ್ಲಿ ಸರ್ಕಾರಕ್ಕೆ ಮನವಿ ಮಾಡಿದ್ದರು. ಜಗನ್ ಸರ್ಕಾರ ಕೃಷ್ಣ ನದಿಯ ತಟದಲ್ಲಿ ನಿರ್ಮಾಣ ಮಾಡಿರುವ ಈ ಮನೆಯೂ ಕೂಡ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿದೆ.