ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 9 ಕೋಟಿ ರೂ. ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು (Electronic City Police) ವಶಕ್ಕೆ ಪಡೆದಿದ್ದಾರೆ.
ಹಣ ಸಾಗಾಟದ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳು ಪೊಲೀಸರಿಗೆ ಖಚಿತ ಮಾಹಿತಿ ನೀಡಿದ್ದರು. ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ವಾಹನವನ್ನು ಪೊಲೀಸರು ಅಡ್ಡಗಟ್ಟಿ ಪರಿಶೀಲನೆ ನಡೆಸಿದಾಗ ಹಣ ಪತ್ತೆಯಾಗಿದೆ. ಇದನ್ನೂ ಓದಿ: Exclusive: ನಕಲಿ ಔಷಧಿ ಜಾಲ 5 ರಾಜ್ಯಗಳಿಗೆ ಲಿಂಕ್
ತಮಿಳುನಾಡಿನ ತೂತುಕುಡಿಯ ಸಿಂಧೂ ಜ್ಯೂವೆಲರ್ಸ್ ಮಾಲೀಕ ಸಚಿನ್ ಎಂಬಾತನಿಗೆ ಸೇರಿದ ಹಣ ಎನ್ನಲಾಗಿದೆ. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಹಣ ಮತ್ತು ಸಚಿನ್ ಎಂಬಾತನನ್ನು ಆದಾಯ ತೆರಿಗೆ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
ಐಟಿ ಅಧಿಕಾರಿಗಳು, ಸಚಿನ್ ಮನೆಯನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 1.3 ಕೋಟಿ ನಗದು ಪತ್ತೆಯಾಗಿದೆ. ಹಣ ಯಾರಿಗೆ ಸೇರಿದ್ದು ಎನ್ನುವ ಬಗ್ಗೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪೌರಕಾರ್ಮಿಕರ ಬೋನಸ್ ಹಣದಲ್ಲಿ ಕಮಿಷನ್ ಕೇಳಿದ್ರೆ ಕ್ರಿಮಿನಲ್ ಮೊಕದ್ದಮೆ ದಾಖಲು

