ಬೆಂಗಳೂರು: ಭೋವಿ ನಿಗಮದ (Karnataka Bhovi Development Corporation) ಮೇಲೆ ಇಡಿ ದಾಳಿ ಪ್ರಕರಣ ಸಂಬಂಧ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ. ಹಣ ದುರುಪಯೋಗವಾಗಿರುವುದಾಗಿ ಜಾರಿ ನಿರ್ದೇಶನಾಲಯ (ED) ಅಧಿಕೃತ ಮಾಹಿತಿ ನೀಡಿದೆ.
ಭೋವಿ ಸಮುದಾಯದ ಏಜೆಂಟರ ಮೂಲಕ ನಕಲಿ ಫಲಾನುಭವಿಗಳ ಬ್ಯಾಂಕ್ ಖಾತೆ ಬಳಸಿಕೊಂಡು ಹಣ ವರ್ಗಾವಣೆ ಮಾಡಲಾಗಿದೆ. ಕೆಬಿಡಿಸಿಯಿಂದ ಹಣವನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ದಾಳಿ ವೇಳೆ ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ ಮಾಜಿ ಎಂಡಿ ನಾಗರಾಜಪ್ಪನನ್ನು ವಶಕ್ಕೆ ಪಡೆಯಾಲಾಗಿದ್ದು, ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. ನಕಲಿ ಖಾತೆಗಳನ್ನು ಬಳಸಿಕೊಂಡು ತಮ್ಮ ಸ್ನೇಹಿತರು ಮತ್ತು ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳಲ್ಲಿ ಹಣ ವರ್ಗಾವಣೆ ಮಾಡಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತಿಥಿ ಶಿಕ್ಷಕನಿಂದ ಅತ್ಯಾಚಾರ
ಸದ್ಯ ನಾಗರಾಜಪ್ಪನನ್ನು ಬಂಧಿಸಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಇ.ಡಿ ಹೆಚ್ಚಿನ ತನಿಖೆಗಾಗಿ ನಾಗರಾಜಪ್ಪನನ್ನು 14 ದಿನ ವಶಕ್ಕೆ ಪಡೆದಿದೆ. ಇಡಿ ತನಿಖೆ ವೇಳೆ ಅಕ್ರಮ ಹಣ ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ ಎಂದು ಇ.ಡಿ ಅಧಿಕೃತವಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: UGCET ಪ್ರವೇಶ ಪತ್ರ ಬಿಡುಗಡೆ – ಮೊದಲ ಬಾರಿಗೆ ಕ್ಯೂಆರ್ ಕೋಡ್ ಮಾದರಿ OMR Sheet