ಬೆಳಗಾವಿ: ಕುಂದಾನಗರಿಯ ಹನುಮಾನ ನಗರದ ಆರ್‌ಎಸ್‌ಎಸ್ ಕಾರ್ಯಕರ್ತರೊಬ್ಬರು ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದು, ತಮ್ಮ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
Advertisement
ನಗರದ ಮಹಾಬಳೇಶ್ವರ ನಗರದ ನಿವಾಸಿ ಉಮೇಶ ಬಸವಣ್ಣಿ ದಂಡಗಿ ಎಂಬುವವರ ಮಿದುಳು ನಿಷ್ಕ್ರಿಯಗೊಂಡಿತ್ತು. ಇದರಿಂದ ಆತನ ಕುಟುಂಬಸ್ಥರು ಅಂಗಾಗ ದಾನ ಮಾಡಲು ಮುಂದಾಗಿದ್ದಾರೆ. ಈ ಮೂಲಕ ನಾಲ್ವರ ಜೀವ ಉಳಿಸಿ ಅಂಧರಿಬ್ಬರ ಬಾಳಿಗೆ ಬೆಳಕಾಗಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್ ಒತ್ತಾಯದ ಮೇರೆಗೆ ವಿಷ್ಣುದಾದ ಇತಿಹಾಸ ಬರೆದ ಮೂವೀ ರೀ-ರಿಲೀಸ್
Advertisement
ನಿನ್ನೆ ತಡರಾತ್ರಿ ಮನೆಯಲ್ಲಿ ಆಕಸ್ಮಿಕವಾಗಿ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಈ ವೇಳೆ ಅವರನ್ನು ಬೆಳಗಾವಿಯ ಕೆಎಲ್‍ಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ. ಈ ವೇಳೆ ಅವರ ಅಂಗಾಂಗಗಳನ್ನು ಝೀರೋ ಟ್ರಾಫಿಕ್‍ನಲ್ಲಿ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಅಪ್ಪು ಹುಟ್ಟು ಹಬ್ಬಕ್ಕೆ ನೇತ್ರದಾನದ ವಾಗ್ದಾನ
Advertisement
Advertisement
ಕೆಎಲ್‍ಇ ಆಸ್ಪತ್ರೆಯಲ್ಲೇ ಇರುವ ರೋಗಿಗೆ ಹೃದಯ ದಾನ ಮಾಡಿದ್ದಾರೆ. ಕೆಎಲ್‍ಇ ಆಸ್ಪತ್ರೆಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಝೀರೋ ಟ್ರಾಫಿಕ್‍ನಲ್ಲಿ ತೆರಳಿ ವಿಮಾನದ ಮೂಲಕ ಬೆಂಗಳೂರಿಗೆ ಲಿವರ್ ರವಾನೆ ಮಾಡಲಾಗಿದೆ. ಧಾರವಾಡದ ಎಸ್‍ಡಿಎಂ ಆಸ್ಪತ್ರೆಗೆ ಒಂದು ಕಿಡ್ನಿ, ಹುಬ್ಬಳ್ಳಿ ತತ್ವದರ್ಶ ಆಸ್ಪತ್ರೆಗೆ ಮತ್ತೊಂದು ಕಿಡ್ನಿಯನ್ನು ಅಂಬುಲೆನ್ಸ್ ಮೂಲಕ ರವಾನೆ ಮಾಡಲಾಗಿದೆ. ಝೀರೋ ಟ್ರಾಫಿಕ್‍ನಲ್ಲಿಯೇ ಧಾರವಾಡ, ಹುಬ್ಬಳ್ಳಿಗೆ ಎರಡು ಪ್ರತ್ಯೇಕ ಅಂಬುಲೆನ್ಸ್‌ಗಳಲ್ಲಿ ಕಿಡ್ನಿ ರವಾನೆ ಮಾಡಲಾಯಿತು.