ಮಂಗಳೂರು: 4 ದಿನಗಳ ಹಿಂದೆ ಹಲ್ಲೆಗೆ ಒಳಗಾಗಿದ್ದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಪಾರ್ಥಿವ ಶರೀರದ ಮೆರವಣಿಗೆ ಬಳಿಕ ಇಂದು ಅಂತ್ಯಕ್ರಿಯೆ ನಡೆಯಲಿದೆ.
ಮಳೆ ನಡುವೆಯೂ ಶವಯಾತ್ರೆಗೆ ಆರ್‍ಎಸ್‍ಎಸ್ ಹಾಗೂ ಬಿಜೆಪಿ ಸಿದ್ಧತೆ ನಡೆಸಿದೆ. ಬಿಜೆಪಿ ಹಿರಿಯ ನಾಯಕರು ಹಾಗೂ ಆರ್‍ಎಸ್‍ಎಸ್ ಮುಖಂಡರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ಮಂಗಳೂರಿನಿಂದ ಶರತ್ ಮನೆಯಿರುವ ಬಂಟ್ವಾಳದ ಸಜಿಪ ಗ್ರಾಮದವರೆಗೂ ಅಂತಿಮ ಶವಯಾತ್ರೆ ನಡೆಯಲಿದೆ. 9.30ರ ವೇಳೆಗೆ ಮಂಗಳೂರಿನ ಆಸ್ಪತ್ರೆಯಿಂದ ಮೆರವಣಿಗೆ ಆರಂಭವಾಗಲಿದೆ. ಹಿಂದೂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆಯಿದೆ
Advertisement
Advertisement
ಮಂಗಳೂರು ನಗರ ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಪಾರ್ಥಿವ ಶರೀರದ ಮೆರವಣಿಗೆ ಹಿನ್ನೆಲೆಯಲ್ಲಿ ಮಂಗಳೂರು ತುಂಬೆಲ್ಲಾ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಯಾವುದೇ ಕ್ಷಣಗಳಲ್ಲಿ ಗಲಾಟೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
Advertisement
Advertisement
ಜಿಲ್ಲೆಯಾದ್ಯಂತ ಒಟ್ಟು 2 ಸಾವಿರಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗಾಗಿ ನಿಯೋಜಿಸಲಾಗಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ, ಬಿ.ಸಿ ರೋಡಿನಲ್ಲಿ ಸಿಆರ್‍ಪಿಎಫ್ ನಿಯೋಜನೆ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಆರ್‍ಎಎಫ್ ಪಡೆ ನಿಯೋಜನೆ, 4 ಕೆಎಸ್‍ಆರ್‍ಪಿ, 2 ಸಿಆರ್‍ಪಿಎಫ್, 2 ಆರ್‍ಎಎಫ್ ತಂಡ ನಿಯೋಜನೆ ಮಾಡಲಾಗಿದೆ. ಉಡುಪಿ, ಚಿಕ್ಕಮಗಳೂರಿನಿಂದ ಅಧಿಕಾರಿಗಳು ಹೆಚ್ಚುವರಿ ಪೊಲೀಸರನ್ನ ಕರೆಸಿಕೊಂಡಿಸಿದ್ದಾರೆ.
ಇದನ್ನೂ ಓದಿ: ಚಿಕಿತ್ಸೆ ಫಲಕಾರಿಯಾಗದೆ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಸಾವು